ಬೆಂಗಳೂರು: ತಮಿಳು ಭಾಷೆಯಿಂದಲೇ ಕನ್ನಡ ಭಾಷೆ ಹುಟ್ಟಿದೆ ಎಂದು ತಮಿಳು ನಟ ಕಮಲ್ ಹಾಸನ್ ಅವರು ಹೇಳುವ ಮೂಲಕ ಇಡೀ ಕನ್ನಡಿಗರ ಕಂಗೆಣ್ಣಿಗೆ ಗುರಿಯಾಗಿದ್ದಾರೆ.
ಇನ್ನು ಕಮಲ್ ಹಾಸನ್ ಹೇಳಿದ ಮಾತಿಗೆ ಕನ್ನಡಿಗರಿಗೆ ಕ್ಷಮೆ ಕೇಳಬೇಕೆಂದು ಕರ್ನಾಟಕ ರಾಜ್ಯದಲ್ಲಿ ಕನ್ನಡ ಪರ ಸಂಘಟನೆಗಳು ಸೇರಿದಂತೆ ಕನ್ನಡ ಚಿತ್ರರಂಗದ ನಟ-ನಟಿಯರು ಕೂಡ ಕಮಲ್ ಹಾಸನ್ ವಿರುದ್ಧ ಗುಡುಗಿದ್ದಾರೆ. ಆದರೆ ನಾನು ಯಾವುದೇ ತಪ್ಪು ಮಾಡಿಲ್ಲ ಹಾಗಾಗಿ ನಾನು ಕ್ಷಮೆ ಕೇಳುವುದಿಲ್ಲ ಎಂದು ಹೇಳುವ ಮೂಲಕ ಇನ್ನಷ್ಟು ಕನ್ನಡಿಗರ ಕಂಗಣ್ಣಿಗೆ ಗುರಿಯಾಗಿದ್ದಾರೆ.
ಕಮಲ್ ಹಾಸನ್ ನಟನೆಯ ʼಥಗ್ ಲೈಫ್ʼ ಸಿನಿಮಾ ಇದೇ ಜೂನ್ 5ರಂದು ದೇಶದಾದ್ಯಂತ ಬಿಡುಗಡೆಯಾಗುತ್ತಿದ್ದು, ರಿಲೀಸ್ ಗೆ ಯಾವುದೇ ರೀತಿ ತೊಂದರೆಯಾಗದಂತೆ ಕಮಲ್ ಹಾಸನ್ ಅರ್ಜಿ ಸಲ್ಲಿಸಿದರು. ಆದರೆ ಈ ಅರ್ಜಿಯನ್ನು ಸಲ್ಲಿಸಿರುವ ಕಮಲ್ ಹಾಸನ್ ಅವರಿಗೆ ನ್ಯಾಯಮೂರ್ತಿ ನಾಗ ಪ್ರಸನ್ನ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಕನ್ನಡ ವಿರೋಧಿಗೆ ಕನ್ನಡ ಪುಸ್ತಕ ಕೊಟ್ಟ ನಟಿ
ಹೌದು, ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರು ತಮಿಳು ನಟ ಕಮಲ್ ಹಾಸನ್ಗೆ ಜಡ್ಜ್ ತರಾಟೆ ತೆಗೆದುಕೊಂಡಿದ್ದಾರೆ. ಕ್ಷಮೆ ಕೇಳಿದ್ರೆ ಮಾತ್ರ ಅರ್ಜಿ ಪರಿಗಣಿಸುತ್ತೇವೆ ಅಂತ ಹೇಳಿದ್ದಾರೆ. ‘ಯಾವುದೋ ಭಾಷೆಯಿಂದ ಇನ್ನೊಂದು ಭಾಷೆ ಹುಟ್ಟಿದೆ ಅಂದ್ರೆ ಹೇಗೆ? ಕನ್ನಡ ಭಾಷೆ ತಮಿಳಿಂದ ಹುಟ್ಟಿದೆ ಅನ್ನೋಕೆ ಅವರೇನು ಇತಿಹಾಸಕಾರರಾ? ಈ ಹಿಂದೆ ರಾಜಗೋಪಾಲಚಾರ್ಯ ಕೂಡ ಕ್ಷಮೆಯನ್ನ ಕೇಳಿದ್ದರು. ಇವತ್ತಿನ ಪರಿಸ್ಥಿತಿ ನಿರ್ಮಾಣಕ್ಕೆ ನೀವೇ ಕಾರಣ, ಈ ರೀತಿ ಹೇಳಿಕೆ ನೀಡಬಾರದು. ಆದರೆ ಕಮಲ್ ಹಾಸನ್ ಕ್ಷಮೆ ಕೇಳದೆ ಇರುವುದು ತಪ್ಪು. ಕಮಲ್ ಹಾಸನ್ ಸಾಮಾನ್ಯ ವ್ಯಕ್ತಿ ಅಲ್ಲ, ಪಬ್ಲಿಕ್ ಫಿಗರ್. ಅವರು ಮೊದಲು ಕ್ಷಮೆ ಕೇಳಲಿ, ಆಮೇಲೆ ಅರ್ಜಿ ಪರಿಗಣಿಸ್ತೇವೆ ಎಂದು ಜಡ್ಜ್ ಹೇಳಿದ್ದಾರೆ.
