ಬೆಂಗಳೂರು: ಆರ್ಸಿಬಿ ನೆಚ್ಚಿನ ತಂಡದ ನಾಯಕರನ್ನು ನೋಡಲು ಅಭಿಮಾನಿಗಳು ಸಾಗರಗಟ್ಟಲೆ ಜಮಾಯಿಸಿದ ಸಂದರ್ಭದಲ್ಲಿ ನೂಕುನುಗ್ಗಲಾಗಿ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಡಳಿತ ಮಂಡಳಿಯು ಮೃತ ಕುಟುಂಬಗಳಿಗೆ ತಲಾ 10 ಲಕ್ಷದಂತೆ ಪರಿಹಾರ ನೀಡಲಾಗುವುದು ಎಂದು ಘೋಷಣೆ ಮಾಡಿದೆ.
ಈಗಾಗಲೇ ಮೃತಪಟ್ಟ ಕುಟುಂಬಕ್ಕೆ ಕರ್ನಾಟಕ ರಾಜ್ಯ ಸರ್ಕಾರದಿಂದ 10 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಿಳಿಸಿರುವ ಬೆನ್ನಲ್ಲೇ ಆರ್ಸಿಬಿ ತಂಡದ ಆಡಳಿತ ಮಂಡಳಿಯೂ ಕೂಡ ಪರಿಹಾರ ಘೋಷಣೆಗೆ ಮುಂದಾಗಿದೆ ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಸ್ವಪ ಮಟ್ಟಿಗೆ ಸಮಾಧಾನ ಆಗಬಹುದು ಎಂದು ಕೆಲವು ಸೋಶಿಯಲ್ ಮೀಡಿಯಾ ನಟಿಜನ್ಸ್ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಮಾಧ್ಯಮದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಡಿಸಿಎಂ ಡಿಕೆಶಿ..!
