ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ “ವಿಶ್ವ ಪರಿಸರ ದಿನಾಚರಣೆ” ಅಂಗವಾಗಿ ಅಯೋಜಿಸಿರುವ ಕಾರ್ಯಕ್ರಮಕ್ಕೆ ಯು.ಆರ್ ರಾವ್ ಭವನ, ಜವಹರಲಾಲ್ ನೆಹರು ತಾರಾಲಯ, ಬೆಂಗಳೂರು ನಲ್ಲಿ ಉಪ ಮುಖ್ಯ ಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ಇಂದು (ಶುಕ್ರವಾರ ಜೂನ್ 06) ರಂದು ರವರು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿಗಳು ಬ್ಲೂ-ಗ್ರೀನ್ ಪ್ರಶಸ್ತಿಗಳ ವಿತರಣೆ ಹಾಗೂ ನಗರದ ಸ್ವಚ್ಛತೆಗಾಗಿ ಪ್ರತ್ಯೇಕ ವ್ಯಾಟ್ಸಪ್ ಸಂಖ್ಯೆ ಬಿಡುಗಡೆ ಮಾಡಿದರು. ಇದನ್ನೂ ಓದಿ: ಸ್ಪರ್ಧಾತ್ಮಕ ಪರೀಕ್ಷೆಗೆ ರೆಡಿಯಾಗ್ತಿದೆ ಬೃಹತ್ ತರಬೇತಿ ಕೇಂದ್ರ
