ದೆಹಲಿ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾತಿ ಜನಗಣತಿ ಬಗ್ಗೆ ಯಾವುದೇ ಒಂದು ನೆಪ ಹೇಳಿ ತಪ್ಪಿಸಿಕೊಳ್ಳುತ್ತಿದೆ ಎಂದು ವಿರೋಧ ಪಕ್ಷದ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದರು. ಆದರೆ ಇದು ಯಾವುದನ್ನು ಲೆಕ್ಕಿಸದೆ ರಾಜ್ಯ ಕಾಂಗ್ರೆಸ್ ಸರ್ಕಾರ ಜಾತಿ ಗಣತಿಗೆ ಅಸ್ತು ಎಂದು ಈಗಾಗಲೇ ಜಾತಿ ಗಣತಿ ನಡೆದಿದೆ.
ಆದರೆ ರಾಜ್ಯದಲ್ಲಿ ಮತ್ತೆ ಜಾತಿ ಗಣತಿ ಮರು ಸರ್ವೇ ಮಾಡಲಾಗುವುದು ಎಂದು ದೆಹಲಿಯಲ್ಲಿ ಕಾಂಗ್ರೆಸ್ ಮಹತ್ವದ ಘೋಷಣೆಯನ್ನು ಘೋಷಿಸಿದೆ.
ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು (ಮಂಗಳವಾರ ಜೂನ್ 10) ರಂದು ದೆಹಲಿ ಪ್ರವಾಸ ಕೈಗೊಂಡಿದ್ದು, ಕಾಂಗ್ರೆಸ್ ಹೈಕಮಾಂಡ್ ಸಭೆಯಲ್ಲಿ ಜಾತಿ ಗಣತಿಯನ್ನು ಮರು ಸರ್ವೇ ಮಾಡಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರು ಹೇಳಿದ್ದಾರೆ.
ಇಂದಿನ ಸಭೆಯಲ್ಲಿ ಜಾತಿ ಜನಗಣತಿಯ ಬಗ್ಗೆ ಚರ್ಚೆ ಮಾಡಿದ್ದೇವೆ. ಜೂನ್ 12ನೇ ತಾರೀಖಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಕೈಲಾದಷ್ಟು ಸಹಾಯ: ರಾಮಲಿಂಗ ರೆಡ್ಡಿ
ನಿರ್ಧಿಷ್ಟ ಕಾಲ ಮಿತಿಯಲ್ಲಿ ಮರು ಸರ್ವೇ ನಡೆಸಲಾಗುವುದು ಎಂದಿರುವ ಕಾಂಗ್ರೆಸ್ ನಾಯಕರು 60, 80, 90 ದಿನಗಳ ಕಾಲ ಮಿತಿಯಲ್ಲಿ ವರದಿ ತರಲು ತೀರ್ಮಾನಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಜೂನ್ 12ರ ಗುರುವಾರ ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದಾರೆ.
