ಬೊಮ್ಮನಹಳ್ಳಿ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗಣೇಶ ದೇವಸ್ಥಾನದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ವರ್ಷ 11ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ ಎಂದು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವಂತಹ ಎಂ ಸತೀಶ್ ರೆಡ್ಡಿ ಅವರು ಹೇಳಿದರು.
11ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಂದು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಸಿಂಗಸಂದ್ರ ಬ್ಲಾಕ್ ನಲ್ಲಿರುವ ಗಣೇಶ ದೇವಸ್ಥಾನದ 11ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸುತ್ತಿರುವುದು ಖುಷಿಯ ಸಂಗತಿ. ಆ ದೇವರು ಎಲ್ಲ ರಾಜ್ಯದ ಜನತೆಗೆ ಸೇರಿದಂತೆ ದೇಶದ ಜನತೆಗೆ ಸುಖ ಸಮೃದ್ಧಿ ನೀಡಲಿ ಎಂದು ಈ ಸಂದರ್ಭದಲ್ಲಿ ಆಶಿಸುತ್ತೇನೆ ಎಂದರು. ಇದನ್ನೂ ಓದಿ: ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಪೆರುಗು ಶ್ರೀ ಸುಧಾ ನೇಮಕ
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಶ್ರೀನಿವಾಸ ರೆಡ್ಡಿ, ಬಿಜೆಪಿ ವಾರ್ಡ್ ಅಧ್ಯಕ್ಷರಾದ ಪ್ರತೀಶ್ ರೆಡ್ಡಿ, ಸ್ಥಳೀಯ ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
