ಅಹಮದಾಬಾದ್ ನಲ್ಲಿ ಏಕಾಏಕಿ ವಿಮಾನ ಪಥನ ಗೊಂಡಿರುವ ಘಟನೆ ನಡೆದಿದೆ. ಗುಜರಾತ್ನ ಅಹಮದಾಬಾದ್ನಲ್ಲಿ ವಿಮಾನ ಪತನಗೊಂಡಿದೆ ಎಂದು ತಿಳಿದು ಬಂದಿದೆ. ಅಹಮದಾಬಾದ್ ಏರ್ಪೋರ್ಟ್ ಬಳಿ ಏಕಾಏಕಿ ವಿಮಾನ ಪತನಗೊಂಡ ಪರಿಣಾಮ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ.
ಏರ್ಪೋರ್ಟ್ ಬಳಿ ಮೇಧಿನಿ ನಗರ್ನಲ್ಲಿ ಈ ಘಟನೆ ಸಂಭವಿಸಿದೆ. ಟೇಕ್ ಆಫ್ ಆಗುತ್ತಿದ್ದಂತೆ ವಿಮಾನ ಪತನವಾಗಿದೆ. ಏರ್ ಇಂಡಿಯಾ ವಿಮಾನದಲ್ಲಿ 242 ಪ್ರಯಾಣಿಕರಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
