ಕಲಬುರಗಿ: ಅಹಮಬಾದ್ ನಲ್ಲಿ ನಡೆದ ವಿಮಾನ ದುರಂತ ಇದೊಂದು ದೊಡ್ಡ ದುರಂತವಾಗಿದ್ದು, ಕೇಂದ್ರ ವಿಮಾನಯಾನ ಖಾತೆಯ ಸಚಿವರಾದ ರಾಮ್ ಮೋಹನ್ ನಾಯ್ಡು ಅವರು ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಸಚಿವ ಈಶ್ವರ್ ಕಂಡ್ರೆ ಅವರು ಆಗ್ರಹಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ದುರಂತಕ್ಕೆ ಕೇಂದ್ರ ಸರ್ಕಾರ ಹೊಣೆ ಹೊತ್ತು ಕೂಡಲೇ ಸಂಬಂಧಪಟ್ಟ ಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ವಿಮಾನ ದುರಂತದಲ್ಲಿ ಅದೆಷ್ಟು ಜೀವಗಳು ಬಲಿಯಾಗಿದ್ದು ತಮ್ಮ ಕುಟುಂಬದವರನ್ನು ಕಳೆದುಕೊಂಡು ಇಂದು ಅದೆಷ್ಟು ಕುಟುಂಬಗಳು ಕಣ್ಣೀರು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ದುರಂತಕ್ಕೆ ನೇರ ಕೇಂದ್ರ ಸರ್ಕಾರವೇ ಹೊಣೆ ಹೊರಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಏರ್ ಇಂಡಿಯಾ ವಿಮಾನದ ಗಗನಸಖಿಯ ಕೊನೆಯ ಕ್ಷಣ ಹೇಗಿತ್ತು ನೋಡಿ..!
ಆರ್ಸಿಬಿ ಗೆಲುವಿನ ಸಂಭ್ರಮದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ಕೇಳುವವರು ಕುಂಭಮೇಳದ ಕಾಲ್ತುಳಿತಕ್ಕೂ ರಾಜೀನಾಮೆ ಕೇಳಬೇಕು. ಸಾವಿನಲ್ಲಿ ರಾಜಕೀಯ ಮಾಡಬಾರದು ಬಿಜೆಪಿಗೆ ಟಾಂಗ್ ಕೊಟ್ಟರು.
ದುರಂತದ ಬೆನ್ನಲ್ಲೇ ಟಾಟಾ ಸಮೂಹ ಪ್ರತಿ ಮೃತ ವ್ಯಕ್ತಿಯ ಸಂತ್ರಸ್ತ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದೆ. ಹಾಗಂತ ಸಂತ್ರಸ್ತ ಕುಟುಂಬಗಳಿಗೆ ಇಂತಹ ದುರಂತದ ಬಳಿಕ ಎಷ್ಟೇ ಕೋಟಿ ಕೊಟ್ಟರೂ ಕಡಿಮೆ ಎಂದರು.
