Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ: ಮಹೇಶ್ವರ್ ರಾವ್
  • Bangalore
  • State

ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ: ಮಹೇಶ್ವರ್ ರಾವ್

admin June 13, 2025 1 minute read
Spread the love

ಬೆಂಗಳೂರು: ಬಿಬಿಎಂಪಿಯ ಅಧಿಕಾರಿ-ನೌಕರರಿಗೆ ಕ್ರೀಡಾ ಕೂಟಗಳನ್ನು ಆಯೋಜಿಸುವುದರಿಂದ ಉತ್ತಮ ಬಾಂಧವ್ಯ ಬೆಳೆಯಲಿದೆ ಎಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ತಿಳಿಸಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ “ನಾಡಪ್ರಭು ಕೆಂಪೇಗೌಡ ದಿನಾಚರಣೆ” ಅಂಗವಾಗಿ ಇಂದು (ಶುಕ್ರವಾರ ಜೂನ್‌ 13) ರಂದು ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ಬಿಬಿಎಂಪಿಯ ಅಧಿಕಾರಿ, ನೌಕರರಿಗೆ 2025 ನೇ ಜೂನ್ 13 ರಿಂದ 19 ರವರೆಗೆ ಆಯೋಜಿಸಿರುವ ಕ್ರೀಡಾಕೂಟಗಳಿಗೆ  ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

ನಾಡಪ್ರಭು ಕೆಂಪೇಗೌಡ ದಿನಾಚರಣೆಯ ಅಂಗವಾಗಿ ಬಿಬಿಎಂಪಿ ಅಧಿಕಾರಿ/ನೌಕರರುಗಳಿಗೆ ಪ್ರತಿ ವರ್ಷ ಕ್ರೀಡಾಕೂಟ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಇದು ಒಳ್ಳೆಯ ಕಾರ್ಯಕ್ರಮವಾಗಿದ್ದು, ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ಜೊತೆಗೆ ಅಧಿಕಾರಿ-ನೌಕರರಲ್ಲಿ ಬಾಂಧವ್ಯ, ಹುಮ್ಮಸ್ಸು ಮೂಡಲಿದೆ ಎಂದು ಹೇಳಿದರು.

ಕೇವಲ ಕ್ರೀಡೆಯಲ್ಲಿ ಆಸಕ್ತಿಯುಳ್ಳವರು ಮಾತ್ರ ಪಾಲ್ಗೊಳ್ಳದೆ ಕ್ರೀಡಾ ಕೂಟದ ವೇಳೆ ಎಲ್ಲಾ ಅಧಿಕಾರಿ/ನೌಕರರು ಪಾಲ್ಗೊಳ್ಳಬೇಕು. ಅದಕ್ಕಾಗಿ ಉತ್ತಮ ಯೋಜನೆಗಳನ್ನು ರೂಪಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಕ್ರೀಡಾ ಕೂಟದಲ್ಲಿ ಪಾಲ್ಗೊಳ್ಳುವ ಅಧಿಕಾರಿಗಳಿಗೆ ಹೆಚ್ಚು ಉತ್ತೇಜನ ನೀಡಬೇಕು. ಅದರ ಜೊತೆಗೆ ಅವರ ಮಕ್ಕಳನ್ನು ಕೂಡಾ ಇದರಲ್ಲಿ ಪಾಲ್ಗೊಳ್ಳುವಂತೆ ಮಾಡಲು ಯೋಜನೆಗಳನ್ನು ರೂಪಿಸಲು ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಿದರು.

ಶಿಕ್ಷಣ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ಮಾತನಾಡಿ, ಅಧಿಕಾರಿ-ನೌಕರರಿಗೆ ಪ್ರತಿ ವರ್ಷ ಆಯೋಜಿಸುವ ಕ್ರೀಡಾಕೂಟಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು. ಇದನ್ನೂ ಓದಿ:ಕೊಡವ ಸಮಾಜದ ಸಮಾರಂಭಕ್ಕೆ ಡಿಸಿಎಂ ಗೆ ಆಹ್ವಾನ

ಪಾಲಿಕೆಯ ಶಿಕ್ಷಣ ಹಾಗೂ ಕಲ್ಯಾಣ ವಿಭಾಗದಿಂದ ಕ್ರೀಡೆ ಸೇರಿದಂತೆ ಇನ್ನಿತರೆ ವಿಷಯಗಳಲ್ಲಿ ಆಸಕ್ತಿ ಇರುವವರಿಗಾಗಿ ವಿಶೇಷ ಯೋಜನೆಗಳನ್ನು ರೂಪಿಸಲಾಗಿದೆ. ಶಿಕ್ಷಣ ವಿಭಾಗದ ಮೂಲಕ ಶಾಲಾ ಮಕ್ಕಳಲ್ಲಿ ಕ್ರೀಡೆ, ನೃತ್ಯ ಸೇರಿದಂತೆ ಇನ್ನಿತರೆ ಚಟುವಟಿಗೆಳಲ್ಲಿ ಪರಿಣಿತಿ ಪಡೆಯುವ ಸಲುವಾಗಿ ತರಬೇತಿ ನೀಡುವ ಸಂಘ-ಸಂಸ್ಥೆಗಳ ಜೊತೆ ಮಾತನಾಡಿ ತರಬೇತಿ ನೀಡುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

 

About the Author

admin

Administrator

Visit Website View All Posts

Spread the love

Post navigation

Previous: ಕೊಡವ ಸಮಾಜದ ಸಮಾರಂಭಕ್ಕೆ ಡಿಸಿಎಂ ಗೆ ಆಹ್ವಾನ
Next: ಮೊಬೈಲ್ ಬಳಕೆಗಳಿಂದ ಮಕ್ಕಳ ಮೇಲೆ ದುಷ್ಪರಿಣಾಮಗಳ ಕುರಿತ ವಿಶೇಷ ಅಧ್ಯಯನ

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.