ಶಹಾಪುರ, (ಯಾದಗಿರಿ); ಜಿಲ್ಲಾ ಕ್ರಿಡಾಂಗಣದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಆಯೋಜಿದ್ದ ಆರೋಗ್ಯ ಆವಿಷ್ಕಾರ ಯೋಜನೆ ಯಡಿಯಲ್ಲಿ 440.63 ಕೋಟಿ ರೂ. ಮೊತ್ತದ ಕಾಮಗಾರಿಯನ್ನು ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಕಾರ್ಯಕ್ರಮ ಉದ್ಘಾಟಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ ವರ್ಷಕ್ಕೆ 5000 ಕೋಟಿ ಕೆಕೆಆರ್ಡಿಬಿಗೆ ಕೊಡುವುದಾಗಿ ಚುನಾವಣೆ ವೇಳೆ ಭರವಸೆ ನೀಡಿದ್ದೇವೆ. ನಮ್ಮ ಭರವಸೆಯಂತೆ ಇಲ್ಲಿಯವರೆಗೂ 13 ಸಾವಿರ ಕೋಟಿ ರೂ.ಹಣ ನೀಡಿದ್ದೇವೆ. ಇಲ್ಲಿಯವರೆಗೂ 5,300 ಕೋಟಿ ರೂ ಮೊತ್ತ ಖರ್ಚಾಗಿದ್ದು, ಹಲವು ಕಾಮಗಾರಿಗಳ ಫಲ ಜನರಿಗೆ ತಲುಪಿದೆ.
ನಂಜುಡಪ್ಪ ಅವರ ವರದಿಯ ಆಶಯಗಳನ್ನು ಸರ್ಕಾರ ಈಡೇರಿಸುತ್ತಿದೆ. ಆರೋಗ್ಯ, ಶಿಕ್ಷಣ, ಉದ್ಯೋಗದಲ್ಲಿ ಕಲ್ಯಾಣ ಕರ್ನಾಟಕ ಪ್ರಗತಿ ಸಾಧೀಸುವ ಜೊತೆಗೆ ಮುಲಭೂತ ಸೌಕರ್ಯಗಳ ಈಡೇರಿಕೆಗೆ ಹಣ ವಿನಿಯೋಗ ಮಾಡಲು ಸೂಚನೆ ನೀಡಿದ್ದೇನೆ. ಇದರ ಪ್ರಕಾರ ಆವಿಷ್ಕಾರ ನಡೆದು ಇಂದು 440.63 ಕೋಟಿ ವೆಚ್ಚದ ಆರೋಗ್ಯ ಆವಿಷ್ಕಾರ ಕಾರ್ಯಕ್ರಮ ಉದ್ಘಾಟನೆ ಮಾಡಿದ್ದೇವೆ.
ದಿ.ಕೊಲ್ಲೂರು ಮಲ್ಲಪ್ಪ ಅವರ ಸ್ಮಾರಕಕ್ಕೆ ಜಾಗ ಕೊಟ್ಟಿದ್ದೇವೆ. ಮಲ್ಲಪ್ಪ ಅವರು ಕಲ್ಯಾಣ ಕರ್ನಾಟಕದ ಗಾಂಧಿ ಎಂದು ಕರೆಸಿಕೊಂಡಿದ್ದವರು. ಸ್ವಾತಂತ್ರ್ಯ ಹೋರಾಟಗಾರರಾದ ಇವರ ಸ್ಮಾರಕ ಕೂಡಲೇ ಆಗಬೇಕು ಎಂದು ಸೂಚನೆ ನೀಡಿದರು.
ಬೆಲೆ ಏರಿಕೆಯ ಸೃಷ್ಠಿಕರ್ತ ಪ್ರದಾನಿ ಮೋದಿ
ರಾಜ್ಯದಲ್ಲಿ ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿ ಪರಿವಾರದ ಎಲ್ಲಾ ಸುಳ್ಳುಗಳಿಗೆ ಜನರೇ ಉತ್ತರ ನೀಡುತ್ತಿದ್ದಾರೆ. ಏಕೆಂದರೆ ಅಭಿವೃದ್ಧಿಗೆ ಕೊಟ್ಟಿರುವ ಹಣ ರಾಜ್ಯದ ಜನರ ಮನೆ ಬಾಗಿಲಿಗೆ ತಲುಪಿದೆ. ಬೆಲೆ ಏರಿಕೆಗೆ ಕಾರಣವಾಗಿರುವುದು ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರಕಾರ, ಮೋದಿ ಬರುವ ಮೊದಲು ಚಿನ್ನ, ಪೆಟ್ರೋಲ್, ಡಿಸೇಲ್, ಔಷಧ, ರಸಗೊಬ್ಬರ, ಅಡುಗೆ ಎಣ್ಣೆ, ಅಡುಗೆ ಅನಿಲದ ಬೆಲೆ ಎಸ್ಟಿತ್ತು? ಮೋದಿ ಬಂದ ಬಳಿಕ ಎಷ್ಟು ಏರಿಕೆಯಾಗಿದೆ ನೋಡಿ ಬೆಲೆ ಏರಿಕೆಯ ಸೃಷ್ಠಿಕರ್ತ ಪ್ರಧಾನಿ ಮೋದಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಸುಳ್ಳೆ ಬಿಜೆಪಿಯ ಮನೆ ದೇವರು, ಬಿಜೆಪಿಗೆ ಅಧಿಕಾರ ಇದ್ದಾಗಲೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾಡಲಿಲ್ಲ. ಬಿಜೆಪಿ 371 ಜೆಗೆ ವಿರೋಧವಿತ್ತು. ಉಪ ಪ್ರಧಾನಿ ಆಗಿದ್ದ ಎಲ್.ಕೆ ಅಡ್ವಾಣಿ ಅವರು 371 ಜೆ ಜಾರಿ ಮಾಡುವುದಿಲ್ಲ ಎಂದು ಪತ್ರ ಬರೆದಿದ್ದರು. ಕೊನೆಗೆ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಖರ್ಗೆ, ಧರಂಸಿಂಗ್ ಅವರ ಹೋರಾಟಕ್ಕೆ ಮಾನ್ಯತೆ ನೀಡಿ 371 ಜೆ ಜಾರಿ ಮಾಡಿದರು ಎಂದರು. ಮಲ್ಲಿಕಾರ್ಜು ಖರ್ಗೆ, ದಿ.ಧರಮ್ ಸಿಂಗ್ ಅವರ ಶ್ರಮ ಮತ್ತು ಹೋರಾಟ 371 ಜೆ ಜಾರಿ ಹಿಂದೆ ಕೆಲಸ ಮಾಡಿದೆ ಎಂದು ಶ್ಲಾಘಿಸಿದರು.
ಇದೇ ವೇಳೆ ಸಣ್ಣ ಕೈಗಾರಿಕೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ, ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜೆಯಸಿಂಗ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಯಾದಗಿರಿ ಶಾಸಕ ಚೆನ್ನರೆಡ್ಡಿ ಪಾಟೀಲ್ ತುನ್ನೂರ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು.
ಕಾಂಗ್ರೆಸ್ ಸರ್ಕಾರ ಸರ್ವರಿಗೂ ಸಮಪಾಲು, ಸಮಬಾಳು ನೀಡುತ್ತಿದೆ
ಕಾಂಗ್ರೆಸ್ ಸರ್ಕಾರ ಸರ್ವರಿಗೂ ಸಮಪಾಲು, ಸಮಬಾಳು ನೀಡುತ್ತಿದೆ. 371 ಜೆ ಪಡೆದ ನೀವೆ ಪುಣ್ಯವಂತರು. ಪಂಚ ಗ್ಯಾರಂಟಿಗಳು ಜನರ ಬದುಕಿಗಾಗಿ ಕೊಟ್ಟಂತಹ ಯೋಜನೆಗಳಾಗಿವೆ. ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಆರೋಗ್ಯ ಕ್ಷೇತ್ರದ ಅಭಿವೃದ್ಧಿ ಕಾಣುವ ದೃಷ್ಠಿಯಿಂದ ಆರೋಗ್ಯ ಆವಿಷ್ಕಾರಕ್ಕೆ ಚಾಲನೆ ನೀಡಲಾಗಿದೆ. ಈ ಭಾಗದ ಸಚಿವರು ಮತ್ತು ಶಾಸಕರುಗಳು ಸೇರಿಕೊಂಡು ಅಭಿವೃದ್ದೀ ಪಥಕ್ಕೆ ಕಲ್ಯಾಣ ರಥವನ್ನು ಕರೆದುಕೊಂಡು ಹೋಗುತ್ತಿದ್ದಾರೆ ಇದಕ್ಕೆ ಜನತೆಯ ಆರ್ಶಿವಾದ ಮುಖ್ಯ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವುಕುಮಾರ ಹೇಳಿದರು.
ಸಚಿವ ಸಂಪುಟ ಸಭೆಯಲ್ಲಿ ಈ ಬಾಗಕ್ಕೆ ವಿಶೇಷ ಕಾಳಜಿ ನೀಡಬೇಕೆಂದು ತಿರ್ಮಾನಿಸಿ, ಆರೋಗ್ಯ ಆವಿಷ್ಕಾರ ಯೋಜನೆ ರೂಪಿಸಿ 800 ಕೋಟಿ ರೂ. ಪ್ರಸ್ತಾವನೆಯನ್ನು ಸಂಪುಟಕ್ಕೆ ಸಲ್ಲಿಲಾಯಿತು. ವಿರೋಧ ಪಕ್ಷದವರು ತಾವು ಅಧಿಕಾರದಲ್ಲಿದ್ದಾಗ ಕೆಲಸ ಮಾಡದೆ, ಈಗ ನಮ್ಮ ಕೆಲಸದ ಬಗ್ಗೆ ಟೀಕಿಸುತ್ತಿದ್ದಾರೆ. ಅವರು ಟೀಕಿಸುತ್ತಾ ಕೂರಲಿ, ನಾವು ನಮ್ಮ ಅನುದಾನ ಬಿಡುಗೊಡೆಗೊಳಿಸಿ ಅಭಿವೃದ್ಧಿ ಕಾಮಗಾರಿ ಮಾಡುತ್ತೇವೆ ಆರೋಗ್ಯ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದರು.
ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ, ಸಮಾಜ ಕಲ್ಯಾಣ ಇಲಾಖೆ ಸಚಿವ ಎಸ್.ಸಿ ಮಹಾದೇವಪ್ಪ, ಸಚಿವರಾದ ಎನ್.ಎಸ್ ಭೋಸರಾಜ್, ಡಾ.ಶರಣಪ್ರಕಾಶ ಪಾಟೀಲ್, ರಹೀಂ ಖಾನ್, ಶಾಸಕರಾದ ಬಿ.ಆರ್ ಪಾಟೀಲ್, ಅಲ್ಲಮಪ್ರಭು ಪಾಟೀಲ್, ರಾಧಾಕೃಷ್ಣ ದೊಡ್ಮನಿ, ತಿಪ್ಪಣಪ್ಪ ಕಮಕನೂರ, ಸಂಸದ ಜಿ.ಕುಮಾರ ನಾಯಕ್, ಬಾಬುರಾವ್ ಚಿಂಚನಸೂರ, ಶಾಸಕ ರಾಜಾ ವೇಣುಗೋಪಾಲ್ ನಾಯಕ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಸವರೆಡ್ಡಿ ಅನಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಲ್ಲಾ ಪಟೇಲ್.ಪೊ.ಪಾಟೀಲ್ ಮಕ್ತಾಪುರ, ಬಸನಗೌಡ ಯಾಳಗಿ, ಶಿವುಮಾಹಂತ ಚಂದಾಪುರ, ಮಲ್ಲಣ್ಣಗೌಡ ತಿಪ್ಪನಹಳ್ಳಿ, ಸದ್ಧಾಂ ದಾದುಲ್ಲಾ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳು ಇದ್ದರು.
