ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿಶ್ವ ಪರಿಸರ ದಿನ 2025ರ ಅಂಗವಾಗಿ ಆಯೋಜಿಸಿದ್ದ ಪರಿಸರ ನಡಿಗೆ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು (ಮಂಗಳವಾರ ಜೂನ್ 17) ರಂದು ಚಾಲನೆ ನೀಡಿದ್ದಾರೆ.
ಪರಿಸರ ದಿನಾಚರಣೆಯ ಅಂಗವಾಗಿ ಸೈಕಲ್ ನಲ್ಲಿ ಡಿಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ರೌಂಡ್ ಹೊಡೆದಿದ್ದಾರೆ. ಸೈಕಲ್ ನಲ್ಲಿ ರೌಂಡ್ ಹೊಡಿಯುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಡಿಕೆ ಶಿವಕುಮಾರ್ ಅವರು ಬಿದ್ದಿರುವ ಘಟನೆ ನಡೆದಿದೆ.
ಇನ್ನು ಸೈಕಲ್ ನಿಂದ ನಿಯಂತ್ರಣ ತಪ್ಪಿ ಮೆಟ್ಟಿಲುಗಳ ಮೇಲೆ ಬಿದ್ದ ತಕ್ಷಣವೇ ಅವರ ಜೊತೆಗಿದ್ದ ಬೆಂಬಲಿಗರು ಡಿಕೆ ಶಿವಕುಮಾರ್ ಅವರನ್ನು ಮೇಲಕ್ಕೆ ಎತ್ತಿದ್ದಾರೆ. ಅದೃಷ್ಟವಶಾತ್ ಈ ಸಂದರ್ಭದಲ್ಲಿ ಯಾವುದೇ ತೊಂದರೆಯಾಗಿಲ್ಲ. ಇದನ್ನೂ ಓದಿ: ಪರಿಸರ ನಡಿಗೆ ಕಾರ್ಯಕ್ರಮಕ್ಕೆ ಡಿಸಿಎಂ ಚಾಲನೆ
ಮೇಲೆದ್ದ ನಂತರ ಡಿಕೆ ಶಿವಕುಮಾರ್ ಅವರು ಮಾಧ್ಯಮದವರಿಗೆ ಇದನ್ನೆಲ್ಲ ಮಾಧ್ಯಮದಲ್ಲಿ ತೋರಿಸಬೇಡಿ ಎಂದು ಹೇಳಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
