ಬೆಂಗಳೂರು: ಆರ್ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಕಾಲ್ತುಡಿತಕ್ಕೆ ಒಳಗಾಗಿ 11 ಜನ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕರು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.
ಇನ್ನು ಈ ಪ್ರತಿಭಟನೆಯನ್ನು ಖಂಡಿಸಿ ಕಾಂಗ್ರೆಸ್ ನಾಯಕರು ಬಿಜೆಪಿ ಹಾಗೂ ಜೆಡಿಎಸ್ ಪ್ರತಿಭಟನೆಯನ್ನು ನಡೆಸಿದರು.
ದೇಶದಲ್ಲಿ ಪ್ರಧಾನಿ ಮೋದಿ ಅವರ ಆಡಳಿತದಲ್ಲಿ ಅನೇಕ ದುರ್ಘಟನೆಗಳು ನಡೆದಿದೆ ಅದಕ್ಕೆ ಪ್ರತೇಕ್ಷ ಪರೋಕ್ಷವಾಗಿ ನರೇಂದ್ರ ಮೋದಿಯವರೇ ಕಾರಣ ಹಾಗಾದರೆ ಅವರ ರಾಜೀನಾಮೆಯನ್ನು ನೀವು ಕೇಳುವೀರಾ? ಎಂದು ಪ್ರಶ್ನಿಸಿದರು.
ಕರ್ನಾಟಕದ ಬಿಜೆಪಿ-ಜೆಡಿಎಸ್ ನ ನಾಯಕರು ಸಾವಿನ ಮನೆಯಲ್ಲಿ ರಾಜಕೀಯ ಲಾಭ ಪಡೆಯುವ ಪ್ರಯತ್ನವನ್ನು ನಡೆಸುತ್ತಿದ್ದಾರೆ ಈ ಮನಸ್ಥಿತಿ ಹೊಂದಿರುವ ಬಿಜೆಪಿ-ಜೆಡಿಎಸ್ ನಾಯಕರು ಸಾವಿನ ಮನೆಯಲ್ಲಿ ರಾಜಕೀಯ ಮಾಡುವ ಕೀಳು ಮಟ್ಟಕ್ಕೆ ಇಳಿದಿರುವುದು ಬಿಜೆಪಿ-ಜೆಡಿಎಸ್ ನಾಯಕರ ದೌರ್ಬಲ್ಯವನ್ನು ಎತ್ತಿ ತೋರುತ್ತಿದೆ.
ಆರ್ಸಿಬಿ ವಿಜಯೋತ್ಸವ ಪ್ರಕರಣದಲ್ಲಿ ಮುಗ್ಧಜನರ ಸಾವಿಗೆ ಈಗಾಗಲೇ ಸರ್ಕಾರ ಸೂಕ್ತ ನ್ಯಾಯಾಂಗ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ತನಿಖಾ ಆಯೋಗವನ್ನ ರಚಿಸಿದೆ. ಆದರೆ ಬಿಜೆಪಿ ನಾಯಕರು ಮುಗ್ಧರ ಸಾವಿನ ಮನೆಗೆ ಹೋಗಿ ರಾಜಕೀಯ ಲಾಭ ಪಡೆಯುವ ಕುತಂತ್ರದ ಹಾಗೂ ಕೀಳು ಮಟ್ಟದ ರಾಜಕೀಯವನ್ನು ನಡೆಸುತ್ತಿದ್ದಾರೆ.
ಕರ್ನಾಟಕದಲ್ಲಿ ಆಡಳಿತ ನಡೆಸಿ ಭ್ರಷ್ಟಾಚಾರದಲ್ಲಿ ಜೈಲಿಗೆ ಹೋಗಿ ಬಂದವರು ಮುಂದೆ ಜೈಲಿಗೆ ಹೋಗುವವರು ಇಂದು ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ರಾಜೀನಾಮೆಯನ್ನು ಕೇಳುತ್ತಿದ್ದಾರೆ ಹಾಗಾದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೂರು ಬಾರಿ ರಾಜೀನಾಮೆಯನ್ನು ನೀಡಬೇಕಿತ್ತು? ಇದನ್ನೂ ಓದಿ: ಬಿಜೆಪಿ ಬೃಹತ್ ಪ್ರತಿಭಟನೆ; ವಿಜಯೇಂದ್ರ, ಅಶೋಕ್, ಸೇರಿ ಪ್ರಮುಖರ ಬಂಧನ
ರಾಜ್ಯ ಬಿಜೆಪಿ-ಜೆಡಿಎಸ್ ನಾಯಕರ ಮೇಲೆ ಅನೇಕ ಭ್ರಷ್ಟಾಚಾರದ ಪ್ರಕರಣಗಳಿವೆ ಅವರು ಹೇಗೆ ಕೇಂದ್ರದ ಮಂತ್ರಿಗಳಾಗಿದ್ದಾರೆ..? ವಿರೋಧ ಪಕ್ಷದ ನಾಯಕರಾಗಿದ್ದಾರೆ..? ಈ ಮಾಹಿತಿಯನ್ನು ಶ್ರೀ ನರೇಂದ್ರ ಮೋದಿ ಜೀ ನೀವು ಪಡೆದರೆ ಕೂಡಲೇ ಇವರನ್ನ ಸ್ಥಾನದಿಂದ ವಜಾಗೊಳಿಸುವೀರಾ..?
ಕೀಳು ಮಟ್ಟದ ರಾಜಕೀಯ ಮಾಡುತ್ತಿರುವ ಕರ್ನಾಟಕ ರಾಜ್ಯದ ಭ್ರಷ್ಟ ಬಿಜೆಪಿ ನಾಯಕರಿಗೆ ಪ್ರಧಾನಿಗಳೇ ತಿಳುವಳಿಕೆ ಹೇಳಿ. ಇಂತಹ ಕೀಳು ಮಟ್ಟದ ರಾಜಕೀಯವನ್ನು ಕೈ ಬಿಟ್ಟು ನ್ಯಾಯಯುತವಾಗಿ ಹೋರಾಟದ ಹಾದಿಯಲ್ಲಿ ಸಾಗಲು ಪ್ರಧಾನಿ ನರೇಂದ್ರ ಮೋದಿ ಭ್ರಷ್ಟ ಬಿಜೆಪಿ ನಾಯಕರಿಗೆ ತಿಳಿಸಬೇಕು ಎಂದರು.
