ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಎಂ ಸತೀಶ್ ರೆಡ್ಡಿ ಅವರು ಇಂದು (ಬುಧವಾರ ಜೂನ್ 18) ರಂದು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ರೂಪೇನ ಅಗ್ರಹಾರದಲ್ಲಿರುವ ರೌಂಡ್ ಟೇಬಲ್ ಶಾಲೆಯ ನೂತನ ಕಟ್ಟಡದ ಹೊಸ ಬ್ಲಾಕ್ ಉದ್ಘಾಟನೆ ನೆರವೇರಿಸಿದರು.
ಶಾಲಾ ಕಟ್ಟಡ ಉದ್ಘಾಟನೆ ಮಾಡಿದ ನಂತರ ಮಾತನಾಡಿದ ಅವರು, ಈ ನೂತನ ಕಟ್ಟಡ ಶಾಲೆಯ ಮೂಲಸೌಕರ್ಯವನ್ನು ಮತ್ತಷ್ಟು ಉತ್ತಮಗೊಳಿಸಿ, ಮಕ್ಕಳಿಗೆ ಉತ್ತಮ ಕಲಿಕಾಸೌಲಭ್ಯ ಒದಗಿಸುವಲ್ಲಿ ಮಹತ್ತ್ವಪೂರ್ಣ ಪಾತ್ರವಹಿಸಲಿದೆ ಎಂದು ಹೇಳಿದರು.
ಮಕ್ಕಳ ಶಿಕ್ಷಣದ ಉತ್ತರಣೆಯೇ ನಮ್ಮ ಭವಿಷ್ಯವನ್ನು ರೂಪಿಸುವ ಶಕ್ತಿ. ಈ ಮೂಲಕ ಉತ್ತಮ ಭವಿಷ್ಯ ನಿರ್ಮಾಣದ ದಿಕ್ಕಿನಲ್ಲಿ ಮತ್ತೊಂದು ಹೆಜ್ಜೆ ಇಡಲಾಗಿದೆ. ಇಂದಿನ ಮಕ್ಕಳೇ ನಾಳೆ ದೇಶ ಆಳುವ ನಾಯಕರಗಳಾಗುತ್ತಾರೆ ಹಾಗಾಗಿ ಪ್ರತಿಯೊಬ್ಬ ಮಕ್ಕಳಿಗೂ ಕೂಡ ಉತ್ತಮ ಶಿಕ್ಷಣ ಕೊಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯದಲ್ಲಿ ಉತ್ತಮ ಮಳೆ ರೈತರ ಮುಖದಲ್ಲಿ ಮಂದಹಾಸ
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ನರೇಂದ್ರ ಬಾಬು ರವರು, ಅಂತರರಾಷ್ಟ್ರೀಯ ಮಾನವ ಹಕ್ಕುಗಳ ರಕ್ಷಣಾ ಸಮಿತಿಯ ಉಪಾಧ್ಯಕ್ಷರಾದ ಡಾ. ಕೆ.ಜೆ. ಪುರುಷೋತ್ತಮ್ ರವರು, ಶಾಲೆಯ ಆಡಳಿತ ಮಂಡಳಿಯವರು,ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
