Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಸಿಎಂ
  • Bangalore
  • Front news
  • Politics
  • State

532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಸಿಎಂ

admin June 18, 2025 1 minute read
Spread the love

ಬೆಂಗಳೂರು: ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ವಜ್ರ ಮಹೋತ್ಸವವನ್ನು ಉದ್ಘಾಟಿಸಿ, ವಜ್ರಜ್ಯೋತಿ ಸ್ಮರಣ ಸಂಚಿಕೆ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ನಮ್ಮದು ನುಡಿದಂತೆ ನಡೆಯುವ ಸರ್ಕಾರ. ನಿಮ್ಮ ಬೇಡಿಕೆಗಳ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ. NPS ಜಾರಿ ಮಾಡಿದ್ದು ಕೇಂದ್ರ ಸರ್ಕಾರ. ನಾವು OPS ಜಾರಿಯನ್ನು ಪ್ರಣಾಳಿಕೆಯಲ್ಲೇ ಘೋಷಿಸಿದ್ದೇವೆ. ಈ ಬಗ್ಗೆ ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು.

1964 ರಲ್ಲಿ ಆರಂಭವಾದ ನೌಕರರ ಸಂಘ ಇಷ್ಟು ಮಹತ್ತರ ವರ್ಷಗಳ ಕಾಲ ನಿರಂತರವಾಗಿ ನೌಕರರ ಕಷ್ಟ ಸುಖಗಳಿಗೆ ಸ್ಪಂದಿಸಿ, ಪ್ರಾಮಾಣಿಕ ಹೋರಾಟ ನಡೆಸುತ್ತಿದೆ. ಜೊತೆಗೆ ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಸುವ ಹೊಣೆಗಾರಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದೀರಿ. ಇದಕ್ಕೆ ನೀವೆಲ್ಲರೂ ಅಭಿನಂದನಾರ್ಹರು ಎಂದು ಶ್ಲಾಘಿಸಿದರು.

ಇಡೀ ಏಷ್ಯಾದಲ್ಲಿ ಮೊದಲಿಗೆ ವಿದ್ಯುತ್ ಉತ್ಪಾದನೆ ಆಗಿದ್ದು1902 ರಲ್ಲಿ ಕರ್ನಾಟಕದಲ್ಲಿ. 1905 ರಲ್ಲಿ ಬೆಂಗಳೂರಿನಲ್ಲಿ ಪ್ರಥಮ ವಿದ್ಯುತ್ ಸರಬರಾಜು ಕಂಪನಿ ಆರಂಭಿಸಲಾಯಿತು. 1908 ರಲ್ಲಿ ಮೊದಲ ಬಾರಿ ಅರಮನೆಗೆ ವಿದ್ಯುತ್ ಬಂತು. ಅಲ್ಲಿಂದ ಇಲ್ಲೀವರೆಗೆ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ನಾವು 34000 ಮೆಘಾ ವ್ಯಾಟ್ ಉತ್ಪಾದನೆ ಮಾಡುತ್ತಿರುವ ರಾಜ್ಯ ಎನ್ನುವ ಹೆಗ್ಗಳಿಕೆ ಕೇವಲ ನಮ್ಮ ರಾಜ್ಯದ್ದಾಗಿದೆ ಎಂದರು. ಇದನ್ನೂ ಒದಿ: ಮಹಿಳೆಯರ ಹಕ್ಕುಗಳಿಗಾಗಿ ಹೋರಾಡಿದವರು ಅಂಬೇಡ್ಕರ್: ಮಹದೇವಪ್ಪ

ಆಹಾರ ಉತ್ಪಾದನೆಯಲ್ಲಿ ನಾವು ಸ್ವಾವಲಂಬಿಗಳಾಗುತ್ತಿರುವುದು ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಿರುವ ಕಾರಣಕ್ಕೇ ಎಂದು ವಿಶ್ಲೇಷಿಸಿದರು.

ರೈತರಿಗೆ, ಕೃಷಿಗೆ, ಪಂಪ್ ಸೆಟ್ ಗಳಿಗೆ ಹಗಲಲ್ಲೂ 7 ಗಂಟೆ ಅಗತ್ಯ ವಿದ್ಯುತ್ ಸರಬರಾಜು ಮಾಡಲು ಶಕ್ತರಾಗುತ್ತೇವೆ. ಈ ಗುರಿ ಇಟ್ಟುಕೊಂಡು ಕೆಲಸಗಳು ನಡೆಯುತ್ತಿವೆ. 60000 ಮೆಘಾ ವ್ಯಾಟ್ ಉತ್ಪಾದನೆ ಗುರಿ ನಾವು ತಲುಪಿದ ತಕ್ಷಣ ಇದು ಸಾಧ್ಯವಗಲಿದೆ. ವಿದ್ಯುತ್ ಪ್ರಮುಖ ಕಚ್ಛಾವಸ್ತು ಎನ್ನುವುದನ್ನು ನಾವು ಮರೆಯಬಾರದು ಎಂದರು.

ನೌಕರರು ಮತ್ತು ಕಾರ್ಮಿಕರು ಬಹಳ ಶ್ರಮ ವಹಿಸಿ ಕೆಲಸ ನಿರ್ವಹಿಸುತ್ತಿದ್ದೀರಿ. ನಿಮ್ಮ ಎಲ್ಲಾ ಬೇಡಿಕೆಗಳನ್ನೂ ಈಡೇರಿಸಲು ನಮ್ಮ ಸರ್ಕಾರ ಸಿದ್ಧವಿದೆ. ನಾವು ನಿಮ್ಮ ಜೊತೆಗೆ ಇದ್ದೇವೆ. ನೀವು ನಮ್ಮ ಜೊತೆಗೆ ಇರಿ ಎಂದು ಕರೆ ನೀಡಿದರು.

About the Author

admin

Administrator

Visit Website View All Posts

Spread the love

Post navigation

Previous: ಮಹಿಳೆಯರ ಹಕ್ಕುಗಳಿಗಾಗಿ ಹೋರಾಡಿದವರು ಅಂಬೇಡ್ಕರ್: ಮಹದೇವಪ್ಪ
Next: ಕಾಕಾ ಸಾಹೇಬ್ ಪಾಟೀಲರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ: ಡಿಸಿಎಂ

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.