ಬೆಂಗಳೂರು: ಮಾಜಿ ಶಾಸಕ ಹಾಗೂ ಕಾಂಗ್ರೆಸ್ ನಾಯಕರಾದ ಕಾಕಾ ಸಾಹೇಬ್ ಪಾಟೀಲ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
ಕಾಕಾ ಸಾಹೇಬ್ ಪಾಟೀಲರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ಪಾಟೀಲ್ ಅವರು 3 ಬಾರಿ ಶಾಸಕರಾಗಿ ಕೆಲಸ ಮಾಡಿದ್ದು, ಸಾರ್ವಜನಿಕ ಸೇವೆಗೆ ತಮ್ಮ ಜೀವನ ಮುಡುಪಿಟ್ಟವರು. ಜಿಲ್ಲಾ ಪಂಚಾಯ್ತಿ ಸದಸ್ಯರಾಗಿ ನಂತರ ಶಾಸಕರಾಗಿ ಆಯ್ಕೆಯಾಗಿದ್ದರು. 1999 ರಿಂದ 2013 ರ ವರೆಗೂ ಸತತವಾಗಿ ಚುನಾವಣೆ ಗೆಲ್ಲುವ ಮೂಲಕ ಕಾಂಗ್ರೆಸ್ ನ ಪ್ರಭಾವಿ ಶಾಸಕರಾಗಿದ್ದರು. ಅಲ್ಲದೆ ಅಪಾರ ಕಾರ್ಯಕರ್ತರನ್ನು ಬೆಳೆಸಿದ್ದ ನಾಯಕರು. ಇದನ್ನೂ ಓದಿ: 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಸಿಎಂ
ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಡಿ.ಕೆ. ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
