ಬೆಂಗಳೂರು: ರಾಜ್ಯದಲ್ಲಿರುವಂತಹ ಸರ್ಕಾರಿ ಶಾಲೆಗಳಲ್ಲಿ ಬಿಸಿಊಟ ನೀಡಲಾಗುತ್ತಿದ್ದು ಇದರಿಂದ ಎಷ್ಟೋ ಬಡ ಮಕ್ಕಳ ಹೊಟ್ಟೆ ತುಂಬುತ್ತಿದೆ.
ಇನ್ನು ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಕರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿಯನ್ನು ನೀಡಿದೆ.
ಹೌದು, ಬಿಸಿ ಊಟ ತಯಾರಕರು ಹಾಗೂ ಸಹಾಯಕರಿಗೆ ರಾಜ್ಯ ಸರ್ಕಾರ ಮಾಸಿಕ ಗೌರವ ಸಂಭಾವನೆ ಹೆಚ್ಚಿಸಲು ಆದೇಶ ಹೊರಡಿಸಿದೆ. ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆಯವರು ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆ 1,000 ರೂ. ಹೆಚ್ಚಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.
ಮಧ್ಯಾಹ್ನ ಉಪಹಾರ ಯೋಜನೆಯಡಿ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು ಹೆಚ್ಚಿಸಲಾಗಿದೆ.
ಮುಖ್ಯ ಅಡುಗೆಯವರಿಗೆ ಮಾಸಿಕ ಗೌರವಧನವನ್ನು 3,700 ರಿಂದ 4,700 ರೂ.ಗೆ ಹೆಚ್ಚಿಸಲಾಗಿದೆ. ಅಂತೆಯೇ ಅಡುಗೆ ಸಹಾಯಕರಿಗೆ 3,600 ರೂ.ನಿಂದ 4,600 ರೂ.ಗೆ ಹೆಚ್ಚಳ ಮಾಡಲಾಗಿದೆ. ಇದನ್ನೂ ಓದಿ: ನೆಟ್ಟಗಿಡ ಇನ್ನೊಂದು ಜೀವಕ್ಕೆ ಆಧಾರವಾಗಬೇಕು: ತಿಮ್ಮಕ್ಕ
ರಾಜ್ಯದ ಎಲ್ಲಾ 31 ಜಿಲ್ಲಾ ಪಂಚಾಯಿತಿಗಳ ಸಿಇಒಗಳು ಹಾಗೂ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಸರ್ಕಾರದ ಆದೇಶದಲ್ಲಿ ಸೂಚಿಸಲಾದ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ತಿಳಿಸಲಾಗಿದೆ
