ಚಿಕ್ಕಬಳ್ಳಾಪುರ: ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ (SMSIMSR) MRI ಉಪಕರಣಗಳು ಮತ್ತು ತಾಯಿ ಮತ್ತು ಮಕ್ಕಳ ಆರೈಕೆ ಕೇಂದ್ರಕ್ಕಾಗಿ ವರ್ಧಿತ ಉನ್ನತ ಸೌಲಭ್ಯಗಳನ್ನು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಇಂದು (ಗುರುವಾರ ಜೂನ್ 19) ಉದ್ಘಾಟಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿರುವ ಪ್ರಶಾಂತಿ ಬಾಲಮಂದಿರ ಟ್ರಸ್ಟ್ (PBMT) ಮತ್ತು ಇನ್ಫೋಸಿಸ್ ಫೌಂಡೇಶನ್ ಸಂಸ್ಥಾಪಕರೂ, ಟ್ರಸ್ಟಿಗಳೂ ಆದ ಮಧುಸೂದನ್ ಸಾಯಿ ಅವರ ದಿವ್ಯ ಸಮ್ಮುಖದಲ್ಲಿ ಜಂಟಿಯಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದನ್ನೂ ಓದಿ:
ಈ ಸಂದರ್ಭದಲ್ಲಿ ಇನ್ಫೋಸಿಸ್ ಫೌಂಡೇಶನ್ ಟ್ರಸ್ಟಿ ಸುನಿಲ್ ಕುಮಾರ್ ಧಾರೇಶ್ವರ ಉಪಸ್ಥಿತರಿದ್ದರು.
