ಬೆಂಗಳೂರು: ಕೇಂದ್ರದ ವಿರೋಧ ಪಕ್ಷದ ನಾಯಕರಾಗಿರುವಂತಹ ರಾಹುಲ್ ಗಾಂಧಿ ಅವರ ಜನ್ಮದಿನದ ಪ್ರಯುಕ್ತ ಕರ್ನಾಟಕ ರಾಜ್ಯದ ಕೆಪಿಸಿಸಿ ಕಚೇರಿಯಲ್ಲಿ ನಿನ್ನೆ (ಗುರುವಾರ ಜೂನ್ 19) ರಂದು ನೇತ್ರದಾನ ಶಿಬಿರವನ್ನು ಏರ್ಪಡಿಸಲಾಗಿತ್ತು.
ಇನ್ನು ಈ ನೇತ್ರದಾನ ಶಿಬಿರದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೇತ್ರದಾನ ಮಾಡಿದ್ದಾರೆ.
ನೇತ್ರದಾನ ಪತ್ರಕ್ಕೆ ಸಹಿ ಹಾಕಿದ ನಂತರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ನಮ್ಮ ಯುವ ಕಾಂಗ್ರೆಸ್ ವತಿಯಿಂದ ನೇತ್ರದಾನ ಶಿಬಿರ ಹಮ್ಮಿಕೊಂಡಿದ್ದಾರೆ. ನಾನು ಕೂಡ ನನ್ನ ನೇತ್ರ ದಾನ ಮಾಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಜನಾರ್ದನ್ ರೆಡ್ಡಿಗೆ ಮತ್ತೆ ಒಲಿದು ಬಂದ ಶಾಸಕ ಸ್ಥಾನ!
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಶ್ರೀ ಮಂಜುನಾಥ್ ಭಂಡಾರಿ, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀ ಹೆಚ್ ಎಸ್ ಮಂಜುನಾಥ್, ರಾಜ್ಯ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಭಂಡಾರಿ ಸೇರಿದಂತೆ ಯುವ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
