ಬೆಂಗಳೂರು: ಇಂದು ವಿಶ್ವದಾದ್ಯಂತ ವಿಶ್ವ ಯೋಗ ದಿನಾಚರಣೆ ಆಚರಿಸಲಾಗುತ್ತಿದ್ದು, ವಿಧಾನಸೌಧದ ಮುಂದುಗಡೆ ಯೋಗ ದಿನಾಚರಣೆಯ ಅಂಗವಾಗಿ “ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ ಎನ್ನುವ ಧ್ಯೇಯವಾಕ್ಯ ಸಾಕಾರಗೊಳಿಸುವ ನಿಟ್ಟಿನಲ್ಲಿ ಇಂದು (ಶನಿವಾರ ಜೂನ್ 21) ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 8:30 ರವರಿಗೆ ಯೋಗ ಕಾರ್ಯಕ್ರಮ ನಡೆಸಲಾಯಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಭಾಗವಹಿಸಿದ್ದರು.
ಇನ್ನು ಇದೇ ಸಂದರ್ಭದಲ್ಲಿ ಮಾತನಾಡಿದ ರಾಜ್ಯಪಾಲರು, ಪ್ರತಿದಿನ ಎಲ್ಲರೂ ಯೋಗಾಭ್ಯಾಸ ಮಾಡುವುದರಿಂದ ನಮ್ಮ ಆರೋಗ್ಯ ಸುಧಾರಿಸುವುದರ ಜೊತೆಗೆ ಯಾವುದೇ ಆರೋಗ್ಯ ಸಮಸ್ಯೆ ಎದುರಾಗುವುದಿಲ್ಲ ಹಾಗಾಗಿ ಎಲ್ಲರೂ ಪ್ರತಿನಿತ್ಯ ಯೋಗ ಅಭ್ಯಾಸ ಮಾಡಿ ಎಂದು ಕರೆ ನೀಡಿದರು. ಇದನ್ನೂ ಓದಿ: ಡಿಸಿಎಂ ಡಿಕೆ ಶಿವಕುಮಾರ್ ಅವರಿಂದ ಮಹತ್ವದ ನಿರ್ಧಾರ!
ಈ ಸದರ್ಭದಲ್ಲಿ ಹಿರಿಯ ರಾಜಕೀಯ ನಾಯಕರೂ ಸೇರಿ ವಿವಿಧ ಸಂಸ್ಥೆಯ ಯೋಗಪಟುಗಳು ಇದರಲ್ಲಿ ಪಾಲ್ಗೊಂಲ್ಲುವುದರ ಜೊತೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಟ ಅನಿರುದ್ಧ್, ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ್ ಹೊರಟ್ಟಿ, ನಟಿ ಸಾನ್ಯ ಅಯ್ಯರ್, ನಟ ಶೈನ್ ಶೆಟ್ಟಿ ಭಾಗಿಯಾಗಿ ವಿವಿಧ ಆಸನಗಳನ್ನ ಪ್ರದರ್ಶಿಸಿದರು.
