ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ತಮಿಳುನಾಡಿನ ಸೇಲಂ ಉಕ್ಕು ಸ್ಥಾವರದ ಆವರಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಕೇಂದ್ರ ಸಚಿವರಾಗಿರುವಂತಹ ಹೆಚ್ ಡಿ ಕುಮಾರಸ್ವಾಮಿ ಅವರು ಭಾಗವಹಿಸಿದ್ದರು.
ಯೋಗ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರದ ಬೆನ್ನೆಲುಬಾಗಿರುವ ಉಕ್ಕು ಕ್ಷೇತ್ರದ ಕುಟುಂಬದೊಂದಿಗೆ ಯೋಗದ ಅನನ್ಯತೆ, ಅವಿಸ್ಮರಣೆಯ ಕ್ಷಣಗಳನ್ನು ಇಂದು ಅನುಭವಿಸುವ ಭಾಗ್ಯ ನನ್ನದಾಗಿದೆ ಎಂದು ಹೇಳಿದರು.
ಸೇಲಂ ಟೌನ್ಶಿಪ್ನಲ್ಲಿರುವ ಹಿಲ್ ವ್ಯೂ ಕ್ರೀಡಾಂಗಣದಲ್ಲಿ ಸ್ಥಾವರದ ನೂರಾರು ಉದ್ಯೋಗಿಗಳು ಮತ್ತು ಅವರ ಕುಟುಂಬಗಳು ಯೋಗಾಭ್ಯಾಸ ಮಾಡಲು ಒಟ್ಟುಗೂಡಿದರು. ಇದು ಜಗತ್ತಿಗೆ ಭಾರತ ನೀಡಿರುವ ಶಾಶ್ವತ ಕೊಡುಗೆಯಾಗಿದೆ. ಇದನ್ನೂ ಓದಿ: ಯೋಗಾರಂಭದಲ್ಲಿ ಒಂದಾದ ನಮ್ಮ ಬೆಂಗಳೂರು
ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ. ಇದು ಮಾನಸಿಕ ಶಾಂತಿ, ಮಾನಸಿಕ ಸ್ಪಷ್ಟತೆ, ದೈಹಿಕ ಸ್ವಾಸ್ತ್ಯತೆ ಮತ್ತು ಸಾಮೂಹಿಕ ಯೋಗಕ್ಷೇಮಕ್ಕೆ ಪರಿಣಾಮಕಾರಿ ಮಾರ್ಗವಾಗಿದೆ. ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ ಯೋಗವು ಜಗತ್ತನ್ನೇ ಒಗ್ಗೂಡಿಸಿದೆ. ಜಗತ್ತಿನ ಯೋಗಕ್ಷೇಮಕ್ಕೆ ನಮ್ಮ ಪಾರಂಪರಿಕ ಯೋಗವು ಮಹೋನ್ನತ ಕೊಡುಗೆ ನೀಡುತ್ತಿದೆ ಎಂದರು.
