ಉಡುಪಿ: ಸಿಂಪಲ್ ಸ್ಟಾರ್ ನಟ ರಕ್ಷಿತ್ ಶೆಟ್ಟಿ ಅವರು ಉಡುಪಿಯಲ್ಲಿರುವ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಭೇಟಿ ನೀಡಿ ಮುಷ್ಟಿ ಕಾಣಿಕೆ ಅರ್ಪಿಸಿ ಆಶೀರ್ವಾದ ಪಡೆದಿದ್ದಾರೆ.
ಸಾಮಾನ್ಯವಾಗಿ ಈ ದೇವರಿಗೆ ಮುಷ್ಟಿ ಕಾಣಿಕೆ ಅರ್ಪಿಸಿದರೆ ಎಲ್ಲಾ ಕೆಲಸ ಕಾರ್ಯಗಳು ಸುಸೂತ್ರವಾಗಿ ನಡೆಯುತ್ತವೆ ಎಂದು ಅಲ್ಲಿನ ಜನರ ನಂಬಿಕೆಯಾಗಿದ್ದು, ರಕ್ಷಿತ್ ಶೆಟ್ಟಿ ಅವರು ಕೂಡ ಪದ್ಮನಾಭ ದೇವಸ್ಥಾನಕ್ಕೆ ತೆರಳಿ ಮುಷ್ಟಿ ಕಾಣಿಕೆ ಅರ್ಪಿಸಿದ್ದಾರೆ. ಇದನ್ನೂ ಓದಿ: ನಟ ಸುದೀಪ್ ಹೆಸರು ಹೇಳಿಕೊಂಡು ನಿರ್ದೇಶಕ ನಂದ ಕಿಶೋರ್ ಮಹಾ ವಂಚನೆ ಮಾಡಿದ್ರಂತೆ..!
ಇನ್ನು ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನ ಶತಮಾನಗಳಿಂದ ಆರಾಧಿಸಲ್ಪಡುತ್ತಿರುವ ಪ್ರಸಿದ್ಧ ದೇವಾಲಯವಾಗಿದ್ದು, ಸದ್ಯ ಇಲ್ಲಿ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದೆ. ರಕ್ಷಿತ್ ಶೆಟ್ಟಿಯವರು ಸಿನಿಮಾ ಒಂದರ ಕೆಲಸದಲ್ಲಿ ದೇಗುಲಕ್ಕೆ ತೆರಳಿ ಮುಷ್ಟಿ ಕಾಣಿಕೆ ಸಮರ್ಪಿಸಿದ್ದಾರೆ.
