ಚಿಕ್ಕೋಡಿ: ಮುಖ್ಯಮಂತ್ರಿ ವಿಶೇಷ ಅನುದಾನದ ಅಡಿಯಲ್ಲಿ ಸಮುದಾಯ ಭವನ ನಿರ್ಮಿಸಲು 13 ಕೋಟಿ ಅನುದಾನ ಎರಡು ವರ್ಷ ಹಿಂದೇನೆ ಬಿಡುಗಡೆಯಾಗಿದ್ದರೂ ಕೂಡ ನಮಗೆ ವರ್ಕ್ ಆರ್ಡರ್ ಕೊಟ್ಟಿಲ್ಲ ಎಂದು ಕಾಂಗ್ರೆಸ್ ನ ಶಾಸಕ ರಾಜು ಕಾಗೆ ಅವರು ಸ್ವಪಕ್ಷದ ವಿರುದ್ಧವೇ ಆಕ್ರೋಶ ಹೊರಹಾಕಿದ್ದಾರೆ.
ಚಿಕ್ಕೋಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 13 ಕೋಟಿ ಅನುದಾನ ಎರಡು ವರ್ಷ ಕಳೆದರೂ ಕೂಡ ಇದುವರೆಗೂ ನಮ್ಮ ಕೈ ಸೇರಿಲ್ಲ. ನಮ್ಮ ಸರ್ಕಾರದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಯಾವೊಂದು ಅಭಿವೃದ್ಧಿ ಕೆಲಸವೂ ನಡೆಯುತ್ತಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ನಕಲಿ ತಂಗಿ ಬಗ್ಗೆ ಡಿ.ಕೆ ಸುರೇಶ್ ಹೇಳಿದ್ದೇನು?
25 ಕೋಟಿ ಅನುದಾನ ನೀಡಿ 2 ವರ್ಷ ಕಳೆದರೂ ವರ್ಕ್ ಆರ್ಡರ್ ಇಲ್ಲ. 2 ವರ್ಷ ಕಳೆದರೂ ವರ್ಕ್ ಆರ್ಡರ್ ನೀಡುತ್ತಿಲ್ಲ ಅಂದ್ರೆ ಏನರ್ಥ? ಇದರಿಂದ ನನ್ನ ಮನಸ್ಸಿಗೆ ಸಾಕಷ್ಟು ನೋವಾಗಿದೆ. ನಾನು ಸಹ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ. ಅನುದಾನ ವಿಚಾರದಲ್ಲಿ 2 ದಿನದಲ್ಲಿ ರಾಜೀನಾಮೆ ಕೊಡ್ತೀನಿ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಹೊಸ ಬಾಂಬ್ ಸಿಡಿಸಿದ್ದಾರೆ.
