Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವರನ್ನ ಭೇಟಿಮಾಡಿದ ಸಿಎಂ
  • National
  • Politics

ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವರನ್ನ ಭೇಟಿಮಾಡಿದ ಸಿಎಂ

admin June 24, 2025 1 minute read
Spread the love

ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಇಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ರಾಜ್ಯಗಳ ನಡುವೆ ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಬೆಳವಣಿಗೆಗೆ ಪೂರಕವಾಗಿರುವ ವಿಧಾನವನ್ನು ಅನುಸರಿಸಲು 16ನೇ ಹಣಕಾಸು ಆಯೋಗಕಕ್ಕೆ ಪ್ರತಿಪಾದಿಸುವಂತೆ ಕೇಂದ್ರ ಸರ್ಕಾರವನ್ನು ವಿನಂತಿಸಿದರು.

15 ನೇ ಹಣಕಾಸು ಆಯೋಗವು ತನ್ನ ಶಿಫಾರಸ್ಸಿನಲ್ಲಿ ಕರ್ನಾಟಕದ ತೆರಿಗೆ ಪಾಲನ್ನು ಶೇ.4.713 ರಿಂದ ಶೇ.3.647 ಕ್ಕೆ ಇಳಿಕೆ ಮಾಡಿದ್ದರಿಂದ ರಾಜ್ಯದ ತೆರಿಗೆ ಪಾಲು 14ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಶೇ.23ರಷ್ಟು ಕಡಿಮೆಯಾಗಿರುವುದರ ಕುರಿತು ಮುಖ್ಯಮಂತ್ರಿಗಳು ಕೇಂದ್ರ ಹಣಕಾಸು ಸಚಿವರಿಗೆ ವಿವರಿಸಿದರು. ಇದಲ್ಲದೆ, 15 ನೇ ಹಣಕಾಸು ಆಯೋಗವು ರಾಜ್ಯಕ್ಕೆ ಶಿಫಾರಸ್ಸು ಮಾಡಿದ್ದ ರೂ.11,495 ಕೋಟಿಗಳ ವಿಶೇಷ ಅನುದಾನವು ಸಿಗದ ಕಾರಣ, ಒಟ್ಟಾರೆಯಾಗಿ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಒಟ್ಟು ರೂ.80,000 ಕೋಟಿಗಳು ರಾಜ್ಯಕ್ಕೆ ನಷ್ಟವಾಗಿರುವುದನ್ನು ಮುಖ್ಯಮಂತ್ರಿಗಳು ತಿಳಿಸಿರುತ್ತಾರೆ. ಇದನ್ನೂ ಓದಿ: ರಾಷ್ಟ್ರಪತಿಗಳ ಭೇಟಿಮಾಡಿದ ಸಿಎಂ

15ನೇ ಹಣಕಾಸು ಆಯೋಗವು ರಾಜ್ಯಗಳ ನಡುವೆ ತೆರಿಗೆ ಹಂಚಿಕೆಯ ಸುತ್ರವನ್ನು ಲೆಕ್ಕಮಾಡಲು ಆದಾಯ-ದೂರ (income-distance) ಮಾನದಂಡದ ಮೇಲೆ ಅತಿಯಾಗಿ ಅವಲಂಬಿಸಿದ ಕಾರಣ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಹೆಚ್ಚಿನ ನಷ್ಟವಾಯಿತು. 15 ನೇ ಹಣಕಾಸು ಆಯೋಗವು ಆದಾಯ-ದೂರ ಮಾನದಂಡಕ್ಕೆ ಶೇ.45 ರಷ್ಟು ಅಂಕವನ್ನು ನೀಡಿತ್ತು. ರಾಜ್ಯಕ್ಕೆ ಇದರಿಂದ ಉಂಟಾದ ನಷ್ಟವನ್ನು ತಪ್ಪಿಸುವ ಸಲುವಾಗಿ ಆದಾಯ-ದೂರ ಮಾನದಂಡದ ಅಂಕವನ್ನು ಶೇ.20 ರಷ್ಟು ಕಡಿಮೆ ಮಾಡಿ, ದೇಶದ ಆರ್ಥಿಕ ಪ್ರಗತಿಗೆ (GDP) ರಾಜ್ಯಗಳು ನೀಡುವ ಕೊಡುಗೆಯನ್ನು ಪರಿಗಣಿಸಬೇಕು ಹಾಗೂ ಇದಕ್ಕೆ ಶೇ.20 ರಷ್ಟು ಅಂಕವನ್ನು ನೀಡಬೇಕೆಂದು ಮನವಿ ಮಾಡಿದರು.

About the Author

admin

Administrator

Visit Website View All Posts

Spread the love

Post navigation

Previous: ರೈತರು ಪ್ರತಿಭಟನೆಯನ್ನು ಕೈಬಿಡಲು ಮನವಿ: ಕೆಹೆಚ್. ಮುನಿಯಪ್ಪ
Next: ಸ್ಥಳ ನಮೂದಿಸುವಲ್ಲಿ ಎಡವಟ್ಟು, ಮತ್ತೊಬ್ಬರಿಂದ ಹಣ ಬಳಕೆ ಲೋಕಾಯುಕ್ತ ವರೆಗೆ ದೂರು 

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.