ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಪಕ್ಷ ಶಾಸಕರು ದೊಡ್ಡ ದೊಡ್ಡ ಆರೋಪಗಳನ್ನು ಮಾಡುತ್ತಿದ್ದು, ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡಿರುವ ವಿರೋಧ ಪಕ್ಷದ ನಾಯಕರು ರಾಜ್ಯ ಸರ್ಕಾರದ ವಿರುದ್ಧ ವ್ಯಂಗ್ಯವಾಡುತ್ತಿದ್ದಾರೆ.
ಇನ್ನು ಈ ಸಂಬಂಧ ಪ್ರತಿಕ್ರಿಯಿಸಿರುವ ಎಂ ಬಿ ಪಾಟೀಲ್ ಅವರು, ಅಡ್ಜಸ್ಟ್ಮೆಂಟ್ ರಾಜಕಾರಣ ಯಾರು ಮಾಡುತ್ತಾರೋ ಅವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಲಾಜಿಲ್ಲದೆ ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವರುಗಳ ವಿರುದ್ಧ ಶಾಸಕರ ಆರೋಪ ಹಾಗೂ ಸಚಿವರ ರಾಜೀನಾಮೆಗೆ ಒತ್ತಾಯ ವಿಚಾರ ನಡೆದಾಗ ನಾನು ವಿದೇಶದಲ್ಲಿದ್ದೆ. ನಾನೂ ನೋಡಿದ್ದೇನೆ, ಶಾಸಕರು ಸಿಎಂ ಅವರನ್ನು ಭೇಟಿಯಾಗಿ ಅದರ ಬಗ್ಗೆ ಮಾಹಿತಿ ನೀಡುತ್ತಾರೆ. ಯಾರ‍್ಯಾರು ಹೇಳಿಕೆ ಕೊಟ್ಟಿದ್ದಾರೆ ಅವರನ್ನು ಸಿಎಂ ಕರೆದು ಮಾತನಾಡುತ್ತಾರೆ ಎಂದರು. ಇದನ್ನೂ ಓದಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಲೋಕಾಯುಕ್ತ; ಒಟ್ಟು 34.90 ಕೋಟಿ ಜಪ್ತಿ!
ಏನೇನು ಸಮಸ್ಯೆ ಇದೆಯೋ ಅದನ್ನು ಸಿಎಂ ಪರಿಹರಿಸುತ್ತಾರೆ. ಏನೇ ಸಮಸ್ಯೆ ಇದ್ದರೂ ಮುಖ್ಯಮಂತ್ರಿಗಳು ಬಗೆಹರಿಸುತ್ತಾರೆ. ಶಾಸಕರ ಅಭಿಪ್ರಾಯ ಗೌರವಿಸಬೇಕಾಗುತ್ತದೆ, ಅದನ್ನ ಮಾಡುತ್ತಾರೆ. ಯಾರ ವಿರುದ್ಧ ಆರೋಪ ಮಾಡಿದ್ದಾರೆ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೆ. ಯಾವ ಉಸ್ತುವಾರಿ ಸಚಿವರು ಸ್ಪಂದಿಸುತ್ತಿಲ್ಲ, ಯಾರು ಅಡ್ಜಸ್ಟ್ಮೆಂಟ್ ರಾಜಕಾರಣ ಮಾಡುತ್ತಾರೆ ಅವರ ವಿರುದ್ದ ಸಿಎಂ, ಡಿಸಿಎಂ ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.
