ಬೆಂಗಳೂರು: ಐತಿಹಾಸಿಕ ಕಾವೇರಿ ಆರತಿ ಕಾರ್ಯಕ್ರಮದ ಮಹತ್ವ, ಅದರಿಂದಾಗುವ ಧಾರ್ಮಿಕ, ಸಾಂಸ್ಕೃತಿಕ, ಕಲೆ, ಪ್ರವಾಸೋದ್ಯಮ, ಆರ್ಥಿಕ ಅಭಿವೃದ್ಧಿ ಕುರಿತು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿ ಇಂದು (ಬುಧವಾರ ಜೂನ್ 25) ಮಂಡ್ಯ ಜಿಲ್ಲೆಯ ರೈತ ಮುಖಂಡರು, ಇತರೆ ಸಂಘಟನೆ ಮುಖಂಡರು ಹಾಗೂ ಜನಪ್ರತಿನಿಧಿಗಳ ಜೊತೆ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಸಚಿವರಾದ ಶಿವರಾಜ್ ತಂಗಡಗಿ, ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಕಾವೇರಿ ಆರತಿ ಕಾರ್ಯಕ್ರಮ ರೂಪುರೇಷೆ ಸಮಿತಿ ಹಾಗೂ ಬಿಡಬ್ಲ್ಯೂಎಸ್ಎಸ್ ಬಿ ಅಧ್ಯಕ್ಷ ಡಾ ರಾಮ್ ಪ್ರಸಾತ್ ಮನೋಹರ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ರೈತ ಸಂಘಟನೆಗಳು ಹಾಗೂ ನಾನಾ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು. ಇದನ್ನೂ ಓದಿ: ಅಡ್ಜಸ್ಟ್ಮೆಂಟ್ ರಾಜಕಾರಣಿಗಳ ವಿರುದ್ಧ ಕಠಿಣ ಕ್ರಮ: ಎಂಬಿ ಪಾಟೀಲ್!
