ಬೆಂಗಳೂರು: ಜೊತೆಯಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದ ಕಾರ್ಯಕರ್ತನಿಗೆ ಜೆಡಿಎಸ್ ನ ಸದಸ್ಯ ಸೂರಜ್ ರೇವಣ್ಣ ಅವರು ಅಸಹಜ ಲೈಂಗಿಕ ದೌರ್ಜನ್ಯ ವ್ಯಸಗಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ಅವರ ವಿರುದ್ಧ ದೂರು ದಾಖಲಾಗಿತ್ತು. ದೂರು ಆಧಾರದ ಮೇಲೆ ಸೂರಜ್ ರೇವಣ್ಣ ಅವರನ್ನು ಬಂಧಿಸಲಾಗಿತ್ತು.
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಿಯಾದ ಸಾಕ್ಷಿ ಇಲ್ಲದ ಕಾರಣಕ್ಕೆ ಪ್ರಜ್ವಲ್ ರೇವಣ್ಣ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಹೌದು, ಸೂರಜ್ ರೇವಣ್ಣ ವಿರುದ್ಧ ಬ್ರಿಗೇಡ್ ಖಜಾಂಚಿ ನೀಡಿದ್ದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಸಿಐಡಿ ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ. ಇದನ್ನೂ ಓದಿ: ಜಾತಿ ಸಮೀಕ್ಷೆ; ತಪ್ಪದೇ ತಮ್ಮ ತಮ್ಮ ಮೂಲಜಾತಿಯನ್ನು ನೊಂದಾಯಿಸಿಕೊಳಿ
2024ರಲ್ಲಿ ಸೂರಜ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಿಐಡಿಗೆ ವರ್ಗಾವಣೆ ಆಗಿತ್ತು. ಆರೋಪ ಸಾಬೀತುಪಡಿಸಲು ಬೇಕಾದ ಸಾಕ್ಷ್ಯಗಳು ಸಿಕ್ಕಿಲ್ಲ..ಸಾಕ್ಷ್ಯಗಳ ಕೊರತೆ ಹಿನ್ನೆಲೆ ಸಿಐಡಿ ತನಿಖಾ ತಂಡ ಬಿ ರಿಪೋರ್ಟ್ ಸಲ್ಲಿಸಿದೆ. ಇದರಿಂದ ಜೆಡಿಎಸ್ ನ ಸದಸ್ಯ ಸೂರಜ್ ರೇವಣ್ಣ ಅವರಿಗೆ ಬಿಗ್ ರಿಲೀಸ್ ಸಿಕ್ಕಿದೆ.
