ಮೈಸೂರು: ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಪತ್ನಿ ಗೀತಾ ಅವರ ಜೊತೆ ಫುಲ್ ಜಾಲಿ ಮೂಡಲಿದ್ದಾರೆ.
ಸಿನಿಮಾ ಚಿತ್ರೀಕರಣ ಬಿಡುವಿನ ಸಮಯದಲ್ಲಿ ಕುಟುಂಬದ ಜೊತೆ ಸಮಯ ಕಳೆಯುವ ನಟ ಶಿವರಾಜ್ ಕುಮಾರ್ ಅವರು ಮೈಸೂರಿನ ಕಬಿನಿ ಜಲಾಶಯಕ್ಕೆ ಭೇಟಿ ನೀಡಿ ಕಾಲ ಕಳೆದಿದ್ದಾರೆ.
ಇನ್ನು ಕಬಿನಿ ಜಲಾಶಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರ ಜೊತೆ ಬಲು ಸರಳವಾಗಿ ಕೈಕುಲುಕುವುದರ ಜೊತೆಗೆ ಇನ್ನಷ್ಟು ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ. ಇದನ್ನೂ ಓದಿ: ನ್ಯೂ ಲುಕ್ ನಲ್ಲಿ ಚಿಕ್ಕಣ್ಣ ಫುಲ್ ಶೈನಿಂಗ್!
ಹೌದು, ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಅವರುಗಳು ಕಬಿನಿ ಜಲಾಶಯಗಳಿಗೆ ಭೇಟಿ ನೀಡಿದ್ದರು. ಸ್ಥಳೀಯ ಅರಣ್ಯ ಅಧಿಕಾರಿಗಳು, ಮುಖಂಡರು ಸಹ ಹಾಜರಿದ್ದರು ದಂಪತಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು. ಜಲಾಶಯ ನೋಡಿದ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಅವರುಗಳು ಡ್ಯಾಮ್ ಮೇಲೆ ನಿಂತು ಸೆಲ್ಫಿ ತೆಗೆದುಕೊಂಡರು.
