Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಾಲ್ತುಳಿತ ಘಟನೆ: ಪ್ರತ್ಯಕ್ಷ ಸಾಕ್ಷಿಗಳು ಹೇಳಿಕೆ ಸಲ್ಲಿಸಲು ಡಿ.ಸಿ. ಕರೆ
  • Bangalore
  • State

ಕಾಲ್ತುಳಿತ ಘಟನೆ: ಪ್ರತ್ಯಕ್ಷ ಸಾಕ್ಷಿಗಳು ಹೇಳಿಕೆ ಸಲ್ಲಿಸಲು ಡಿ.ಸಿ. ಕರೆ

admin June 26, 2025 1 minute read
Spread the love

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣ ಗೇಟ್ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಗಳನ್ನು ಸಲ್ಲಿಸಲು ಡಿಸಿ ಕರೆ ನೀಡಿದ್ದಾರೆ.

ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್ 4 ರಂದು ಆರ್.ಸಿ.ಬಿ ಕ್ರಿಕೆಟ್ ತಂಡದ ವಿಜಯೋತ್ಸವದ ಅಭಿನಂದನಾ ಸಮಾರಂಭದ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಯ ಕುರಿತು ಸರ್ಕಾರದ ಆದೇಶದ ಮೇರೆಗೆ ವಿಚಾರಣಾಧಿಕಾರಿಗಳಾದ ಬೆಂಗಳೂರು ನಗರ ಜಿಲ್ಲಾದಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಗದೀಶ.ಜಿ ಅವರು ಸಮಗ್ರವಾದ ವಿಚಾರಣೆಯನ್ನು ನಡೆಸುತ್ತಿರುತ್ತಾರೆ.

ಈ ಘಟನೆಗೆ ಸಂಬಂಧಿಸಿದ ಮಾಹಿತಿ ಅಥವಾ ಪ್ರತ್ಯಕ್ಷವಾಗಿ ನೋಡಿದ ಸಾರ್ವಜನಿಕರು/ ಮಾಧ್ಯಮದವರು ವಿಚಾರಣಾಧಿಕಾರಿಗಳ ಸಮಕ್ಷಮದಲ್ಲಿ ಹಾಜರಾಗಿ ಸಾಕ್ಷ್ಯ ಅಥವಾ ಹೇಳಿಕೆಯನ್ನು ನೀಡಲು ಅವಕಾಶವನ್ನು ಕಲ್ಪಿಸಲಾಗಿದೆ.‌ ಇದನ್ನೂ ಓದಿ: ಆಗಸ್ಟ್‌, ಸೆಪ್ಟೆಂಬರ್‌ ನ ಭವಿಷ್ಯ ನುಡಿದ ರಾಜಣ್ಣ!

ತಮ್ಮ ಹೇಳಿಕೆಯನ್ನು ದಾಖಲಿಸಲು ಇಚ್ಛಿಸುವವರು ಜೂನ್ 27, ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣ, ಜಿಲ್ಲಾಧಿಕಾರಿಗಳ ಕಚೇರಿ, ಬೆಂಗಳೂರು ನಗರ ಜಿಲ್ಲೆ, ಕೆ.ಜಿ.ರಸ್ತೆ, ಬೆಂಗಳೂರು-09 ಇಲ್ಲಿ ತಮ್ಮ ಲಿಖಿತ ರೂಪದ ಪ್ರಮಾಣಿತ ಅಫಿಡವಿಟ್ ನ ಎರಡು ಪ್ರತಿಗಳೊಂದಿಗೆ ಖುದ್ದು ಹಾಜರಾಗಿ ಹೇಳಿಕೆಯನ್ನು ದಾಖಲಿಸಬಹುದಾಗಿದೆ ಎಂದು ವಿಚಾರಣಾಧಿಕಾರಿಗಳು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಆಗಸ್ಟ್‌, ಸೆಪ್ಟೆಂಬರ್‌ ನ ಭವಿಷ್ಯ ನುಡಿದ ರಾಜಣ್ಣ!
Next: ಪತ್ರಕರ್ತರಾಗುವವರಿಗೆ ಮಾತಿಗೆ ಮೊದಲು‌ ನೋಟ ಮುಖ್ಯ: ಕೆ.ವಿ.ಪಿ

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.