ಬೆಂಗಳೂರು: ಪ್ರತಿವರ್ಷದಂತೆ ಈ ವರ್ಷವೂ ಕೂಡ ವಿಶ್ವವಿಖ್ಯಾತ ಮೈಸೂರು ದಸರವನ್ನು ಬಹಳ ವಿಜೃಂಭಣೆಯಿಂದ ಆಚರಿಸಲು (ಶನಿವಾರ ಜೂನ್ 28) ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ದಸರಾ ಮಹೋತ್ಸವ ಪೂರ್ವಭಾವಿ ಸಭೆ ನಡೆಯಿತು.
ಹೌದು, ನಾಡಹಬ್ಬ ಮೈಸೂರು ದಸರಾ ಆಚರಿಸುವ ಸಂಬಂಧ ಪೂರ್ವಭಾವಿಯಾಗಿ ಚರ್ಚಿಸಲು ಇಂದು, ಉನ್ನತ ಮಟ್ಟದ ಸಭೆಯು, ಸಿಎಂ ಅವರ ಅಧ್ಯಕ್ಷತೆಯಲ್ಲಿ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು. ಇದನ್ನೂ ಓದಿ: ʼಕೈʼ ಸರ್ಕಾರದಿಂದ ಬಲವಂತವಾಗಿ ದಲಿತರ ಅರಣ್ಯ ಭೂಮಿ ಸ್ವಾಧೀನ: ನಾರಾಯಣಸ್ವಾಮಿ
ಈ ಸಭೆಯಲ್ಲಿ, ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ಕೆ.ವೆಂಕಟೇಶ್, ಶಿವರಾಜ್ ಎಸ್. ತಂಗಡಗಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಸಂಸದರು, ಶಾಸಕರು ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
