Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಎಂ ಬದಲಾವಣೆ ಬಗ್ಗೆ ಚರ್ಚೆಯಾಗುತ್ತಿಲ್ಲ: ಡಿಸಿಎಂ
  • Bangalore
  • Politics
  • State

ಸಿಎಂ ಬದಲಾವಣೆ ಬಗ್ಗೆ ಚರ್ಚೆಯಾಗುತ್ತಿಲ್ಲ: ಡಿಸಿಎಂ

admin July 1, 2025
Spread the love

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಪಕ್ಷ ಸಂಘಟನೆ ವಿಚಾರ ಹಾಗೂ ಶಾಸಕರ ಅಹವಾಲು ಸ್ವೀಕರಿಸಲು ಸಭೆ ಮಾಡುತ್ತಿದ್ದಾರೆಯೇ ಹೊರತು, ಸಿಎಂ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗುತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ ಕೆ ಶಿವಕುಮಾರ್ ಅವರು ಇಂದು (ಮಂಗಳವಾರ ಜು.01)  ಪ್ರತಿಕ್ರಿಯೆ ನೀಡಿದ ಅವರು,  ಯಾರಿಗೂ ಆತಂಕ ಬೇಡ. ರಾಷ್ಟ್ರಾದ್ಯಂತ ನಾವು ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡುತ್ತಿದ್ದು, ಸಂಘಟನೆ ಹಿನ್ನೆಲೆಯಲ್ಲಿ ಈ ಸಭೆ ಮಾಡಲಾಗುತ್ತಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಈ ವರ್ಷವನ್ನು ಸಂಘಟನೆ ವರ್ಷ ಎಂದು ಘೋಷಣೆ ಮಾಡಿದ್ದಾರೆ. ಹೀಗಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಶಕ್ತಿ ತುಂಬಲು ಹೇಳಿದ್ದಾರೆ. ಖರ್ಗೆ ಅವರು, ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿಗಳು ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಕರೆಸಿ ನವದೆಹಲಿಯಲ್ಲಿ ಸಭೆ ಮಾಡಲಾಗಿದೆ. ಆಮೂಲಕ ಕಾಂಗ್ರೆಸ್ ಕಚೇರಿ ನಿರ್ಮಾಣದಿಂದ, ಪಕ್ಷ ಸಂಘಟನೆವರೆಗೂ ಎಲ್ಲಾ ಜವಾಬ್ದಾರಿಯನ್ನು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶಾಸಕರು ಇಲ್ಲದಿರುವ ಕ್ಷೇತ್ರಗಳ ಜವಾಬ್ದಾರಿಯನ್ನು ಒಬ್ಬೊಬ್ಬ ಶಾಸಕರಿಗೆ ನೀಡಲಾಗಿದೆ” ಎಂದು ವಿವರಿಸಿದರು. ಇದನ್ನೂ ಓದಿ: ಕಾಲ್ತುಳಿತ ಪ್ರಕರಣ: ಸಿಎಟಿ ಆದೇಶ; ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಸಿಎಂ

“ಸಂಘಟನೆ ಕುರಿತು ಮಾರ್ಗದರ್ಶನ ನೀಡಲು ರಣದೀಪ್ ಸಿಂಗ್ ಸುರ್ಜೆವಾಲ ಅವರು ಆಗಮಿಸಿದ್ದು, ಅವರ ಅಹವಾಲುಗಳನ್ನು ಸ್ವೀಕರಿಸಲಾಗುತ್ತಿದೆ. ಕೆಲವು ಶಾಸಕರ ಹೇಳಿಕೆಗಳ ಮಧ್ಯೆ ಪಕ್ಷದಲ್ಲಿ ಶಿಸ್ತು ತರಲು ಪ್ರಯತ್ನಿಸುತ್ತಿದ್ದಾರೆ. ಇದರ ಹೊರತಾಗಿ ನಾಯಕತ್ವ ಬದಲಾವಣೆ, ಸಚಿವಸಂಪುಟ ವಿಸ್ತರಣೆ ಕುರಿತು ಯಾವುದೇ ಚರ್ಚೆ ಇಲ್ಲ. ನಾವುಗಳು ಯಾರೂ ಈಗ ಆತುರದಲ್ಲಿ ಇಲ್ಲ. ನಮಗೆ 2028 ಬಹಳ ಮುಖ್ಯ. ಅದೇ ಮುಖ್ಯ” ಎಂದು ಸ್ಪಷ್ಟಪಡಿಸಿದರು.

ಇಕ್ಬಾಲ್ ಹುಸೇನ್ ಗೆ ನೋಟೀಸ್ ನೀಡುವೆ

ಇಕ್ಬಾಲ್ ಹುಸೇನ್ ಅವರಿಗೆ ನಾನೇ ನೋಟೀಸ್ ನೀಡುತ್ತೇನೆ. ನಾನು ಸಿಎಂ ಆಗುತ್ತೇನೆ ಎಂದು ಯಾರೂ ಹೇಳುವ ಅಗತ್ಯವಿಲ್ಲ. ಯಾರೊಬ್ಬರೂ ಮಾಧ್ಯಮಗಳ ಮುಂದೆ ಮಾತನಾಡುವಂತಿಲ್ಲ. ಇಕ್ಬಾಲ್ ಹುಸೇನ್, ಬಿ.ಆರ್ ಪಾಟೀಲ್, ಬಾಲಕೃಷ್ಣ ಯಾರೇ ಆಗಲಿ, ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಯಾರೂ ಮಾತನಾಡಬಾರದು. ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಅವರಿದ್ದು, ನಾವೆಲ್ಲರೂ ಅವರ ಕೈ ಬಲಪಡಿಸಬೇಕು ಎಂದು ತಿಳಿಸಿದರು.

ಅಭಿವೃದ್ಧಿ ಯೋಜನೆಗಳಿಗಾಗಿ ಬಜೆಟ್ ನಲ್ಲಿ 1 ಲಕ್ಷ ಕೋಟಿ ಅನುದಾನ

ರಾಜ್ಯ ಸರ್ಕಾರ ಬಜೆಟ್ ನಲ್ಲಿ ಅಭಿವೃದ್ಧಿ ಕೆಲಸಗಳಿಗಾಗಿಯೇ 1 ಲಕ್ಷ ಕೋಟಿ ಅನುದಾನ ಮೀಸಲಿಟ್ಟಿದೆ. 54 ಸಾವಿರ ಕೋಟಿ ಗ್ಯಾರಂಟಿ ಯೋಜನೆಗೆ, 19 ಸಾವಿರ ಕೋಟಿ ರೈತರಿಗೆ ವಿದ್ಯುತ್ ನೀಡಲು ವ್ಯಯಿಸಲಾಗುತ್ತಿದೆ. ಸಾಮಾಜಿಕ ಕಲ್ಯಾಣ ಯೋಜನೆ ಸೇರಿದಂತೆ ಇತರೆ ಅಭಿವೃದ್ಧಿ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಇದು ಜನರು ಹಾಗೂ ಕ್ಶೇತ್ರದ ಅಭಿವೃದ್ಧಿಗಳಿಗೆ ಅಲ್ಲವೇ? ನಮ್ಮ ರಾಜ್ಯದಲ್ಲಿ ಆಗುತ್ತಿರುವ ಕಲ್ಯಾಣ ಯೋಜನೆಗಳು ಬೇರೆ ಯಾವುದೇ ರಾಜ್ಯದಲ್ಲಿ ಆಗುತ್ತಿಲ್ಲ” ಎಂದು ತಿಳಿಸಿದರು.

ಮಾಲೂರು ಶಾಸಕರಾದ ನಂಜೇಗೌಡರಿಗೆ ನೀವು ಕೆಎಂಎಫ್ ಸ್ಥಾನ ಕೊಡಿಸುವುದಾಗಿ ಹೇಳಿದ್ದೀರಿ ಎಂದು ಸ್ವತಃ ಶಾಸಕರೇ ಹೇಳಿದ್ದಾರೆ ಎಂದು ಕೇಳಿದಾಗ, “ರಾಜಕೀಯ ಬೆಳವಣಿಗೆಗಳೇ ಬೇರೆ, ಸಹಕಾರ ಕ್ಷೇತ್ರವೇ ಬೇರೆ. ಅದರ ಬಗ್ಗೆ ಈಗ ಚರ್ಚೆ ಮಾಡುವುದಿಲ್ಲ” ಎಂದು ತಿಳಿಸಿದರು.

About the Author

admin

Administrator

Visit Website View All Posts

Spread the love

Post navigation

Previous: ಕಾಲ್ತುಳಿತ ಪ್ರಕರಣ: ಸಿಎಟಿ ಆದೇಶ; ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಸಿಎಂ
Next: ಚಿಕ್ಕಬಳ್ಳಾಪುರದಲ್ಲಿ ಮತ್ತೆ ಮೊಳಗಿತು ‘ಡಿಕೆಶಿ ಮುಂದಿನ ಸಿಎಂ ಎಂಬ ಘೋಷಣೆ!

Views:

8

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.