ಬೆಂಗಲೂರು: ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ಅವರು ಸಖತ್ ಆಕ್ಟಿವ್ ಆಗಿದ್ದಾರೆ. ಸಿನಿಮಾ ರಂಗದಿಂದ ದೂರ ಉಳಿದಿರುವ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿರುತ್ತಾರೆ.
ನಟಿ ರಮ್ಯಾ ಕ್ವೀನ್ಸ್ ಪ್ರೀಮಿಯರ್ ಲೀಗ್ ಗೆ ಅಂಬಾಸಿಟರ್ ಆಗಿದ್ದಾರೆ. ಹೌದು, ಕ್ವೀನ್ಸ್ ಪ್ರೀಮಿಯರ್ ಲೀಗ್ ಇದರ ಬಹುನಿರೀಕ್ಷಿತ ದ್ವಿತೀಯ ಆವೃತ್ತಿಯ ‘ಕ್ರೀಡೋತ್ಸವ’ ಲೋಗೋವನ್ನು ಬೆಂಗಳೂರಿನಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲಾಯಿತು. ಕಳೆದ ವರ್ಷ ಯಶಸ್ವಿಯಾಗಿ ನಡೆದ ಮೊದಲ ಆವೃತ್ತಿಗೆ ಸಿಕ್ಕ ಭರ್ಜರಿ ಪ್ರತಿಕ್ರಿಯೆ ನಂತರ, ಈ ಸಲದ ಆವೃತ್ತಿಯಲ್ಲಿ 12 ಹೊಸ ಕ್ರೀಡೆಗಳನ್ನು ಸೇರಿಸಿಕೊಳ್ಳಲಾಗಿದ್ದು, ಇದು ಕೇವಲ ಕ್ರೀಡೆ ಮಾತ್ರವಲ್ಲ, ಒಂದು ಮನರಂಜನೆಯ ಹಬ್ಬವಾಗುತ್ತಿದೆ.
ಕನ್ನಡ ಚಿತ್ರರಂಗದ ಖ್ಯಾತ ನಟಿ ರಮ್ಯಾ ಅವರು ಲೋಗೋ ಅನಾವರಣ ಮಾಡುವ ಮೂಲಕ ಎರಡನೇ ಆವೃತ್ತಿಗೆ ಚಲನೆ ನೀಡಿದ್ದಾರೆ. ಅಲ್ಲದೆ ರಮ್ಯಾ ಅವರು ಎರಡನೇ ಆವೃತ್ತಿಯಿಂದ ಕ್ವೀನ್ಸ್ ಪ್ರೀಮಿಯರ್ ಲೀಗ್ ಗೆ ಅಂಬಾಸಿಟರ್ ಆಗಿದ್ದಾರೆ. ಇದನ್ನೂ ಓದಿ: ಅಪರೂಪಕ್ಕೆ ಕನ್ನಡದ ಬಗ್ಗೆ ಒಂದೊಳ್ಳೆ ಮಾತನಾಡಿದ ರಶ್ಮಿಕ ಮಂದಣ್ಣ..!
ಇನ್ನು ಲೋಗೋ ಅನಾವರಣಗೊಳಿಸಿ ಮಾತನಾಡಿದ ರಮ್ಯಾ ಅವರು, ಕ್ಯೂಪಿಎಲ್ ಮಹಿಳಾ ಕಲಾವಿದರ ಬೆಂಬಲಿಸಿ, ಅವರನ್ನು ಉತ್ತೇಜಿಸುತ್ತಿರುವ ರೀತಿ ನನಗೆ ತುಂಬಾ ಇಷ್ಟವಾಗಿದೆ. ಈ ವೇದಿಕೆಯ ಮೂಲಕ ಮಹಿಳೆಯರಿಗೆ ಹೆಚ್ಚಿನ ಅವಕಾಶಗಳು ಸಿಗುತ್ತವೆ. ಜೊತೆಗೆ ಮಹಿಳೆಯರು ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಪ್ರೋತ್ಸಾಹಿತರಾಗಬೇಕು. ಇದು ನಮಗೆ ದೈಹಿಕವಾಗಿ ಆರೋಗ್ಯಕರವಾಗಿರುವುದಕ್ಕೆ ಸಹಾಯ ಮಾಡುತ್ತದೆ ಮತ್ತು ಆನ್ಲೈನ್ ಗೇಮಿಂಗ್ ಹಾಗೂ ಸೋಷಲ್ ಮೀಡಿಯಾದಿಂದ ದೂರವಿರಲು ನೆರವಾಗುತ್ತದೆ. ಕ್ಯೂಪಿಎಲ್ನೊಂದಿಗೆ ನನ್ನ ಸಹಯೋಗ ಇರುವುದಕ್ಕೆ ನನಗೆ ಸಂತೋಷವಾಗಿದೆ ಎಂದು ಹೇಳಿದರು.
