ಶಿವಮೊಗ್ಗ: ಶಿಕಾರಿಪುರದಲ್ಲಿಂದು MY ಸೇವಾ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ‘ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣಾ ಕಾರ್ಯಕ್ರಮ’ದಲ್ಲಿ ಭಾಗವಹಿಸಿ ಪುಸ್ತಕವನ್ನು ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ವಿತರಿಸಿದರು.
ಶರಣರ ಪವಿತ್ರ ನೆಲದ ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮ ಶಿಕ್ಷಣ ಪಡೆಯಬೇಕೆಂಬುದು MY ಸೇವಾ ಟ್ರಸ್ಟ್’ನ ಧ್ಯೇಯವಾಗಿದೆ. ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವ ಜತೆಗೆ ಉತ್ತಮ ಮೌಲ್ಯ ಹಾಗೂ ಆದರ್ಶ ಗುಣಗಳನ್ನು ಅಳವಡಿಸಿಕೊಂಡು ಸಾಗಿದಲ್ಲಿ ತಮ್ಮ ಪೋಷಕರಿಗೆ ಕೀರ್ತಿ ತರುವ ಜತೆಗೆ, ದೇಶದ ಆಸ್ತಿಯಾಗಬೇಕೆಂದು ಮನವಿ ಮಾಡಿದರು. ಇದನ್ನೂ ಓದಿ: ಮಠಮಾನ್ಯಗಳು ಬೆಳೆಯಬೇಕಾದರೆ ಜನರಿಂದ ಮಾತ್ರ ಸಾಧ್ಯ: ಸಿಎಂ
ಈ ಸಂದರ್ಭದಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಸಿ.ಕೆ.ರಾಮಮೂರ್ತಿ ಅವರು, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಶ್ರೀ ಗುರುಮೂರ್ತಿ, ಪಕ್ಷದ ತಾಲ್ಲೂಕು ಅಧ್ಯಕ್ಷರಾದ ಶ್ರೀ ಹನುಮಂತಪ್ಪ, ರೈತ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀ ಸಿದ್ದಲಿಂಗಪ್ಪ, ಮುಖಂಡರಾದ ಶ್ರೀ ಕೆ.ರೇವಣಪ್ಪನವರು, ತಾಲ್ಲೂಕಿನ ಸ್ಥಳೀಯ ಮುಖಂಡರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
