Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಾಲ್ತುಳಿತ ಪ್ರಕರಣಕ್ಕೆ ಮೂಲ ಕಾರಣವೇನೆಂದು ತಿಳಿಸಿದ ನ್ಯಾ.ಡಿ ಕುನ್ಹಾ ಆಯೋಗ
  • Bangalore
  • Crime
  • Sports
  • State

ಕಾಲ್ತುಳಿತ ಪ್ರಕರಣಕ್ಕೆ ಮೂಲ ಕಾರಣವೇನೆಂದು ತಿಳಿಸಿದ ನ್ಯಾ.ಡಿ ಕುನ್ಹಾ ಆಯೋಗ

admin July 12, 2025 1 minute read
Spread the love

ಬೆಂಗಳೂರು: ಐಪಿಎಲ್ 2025ನೆಯ ಸಾಲಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ವಿಜಯ ಸಾಧಿಸಿದ್ದು, ಈ ವಿಜಯ ಸಾಧಿಸಿದ ಸಂಭ್ರಮಾಚರಣೆಯನ್ನು ಕರ್ನಾಟಕ ಸರ್ಕಾರವು ಬಹಳ ಅದ್ದೂರಿಯಿಂದ ಆಚರಿಸಲು ತೀರ್ಮಾನಿಸಿ ಆರ್ಸಿಬಿ ತಂಡಕ್ಕೆ ಸನ್ಮಾನ ಹಾಗೂ ಇತರ ಕಾರ್ಯಕ್ರಮಗಳನ್ನು ಜೂನ್ 4ರಂದು ಆಯೋಜನೆ ಮಾಡಲಾಗಿತ್ತು.

ಇನ್ನು ಆರ್‌ಸಿಬಿ ತಂಡದ ನಾಯಕರು ಬೆಂಗಳೂರುಗೆ ಆಗಮಿಸುತ್ತಾರೆ ಎಂದು ತಿಳಿದು ಬರುತ್ತಿದ್ದಂತೆ ಆರ್ಸಿಬಿ ಅಭಿಮಾನಿಗಳು ಸಾಗರಗಟ್ಟಲೆ ಜಮಾಹಿಸಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನುಪ್ಪಿರುವ ಪ್ರಕರಣ ನಡೆದಿದ್ದು, ಈ ಪ್ರಕರಣವನ್ನು ವಿಶೇಷ ಆಯೋಗ ರಚನೆ ಮಾಡಿ ತನಿಖೆ ಆರಂಭಿಸಿತ್ತು.

ಇನ್ನು ಕಾಲ್ತುಳಿತ ಪ್ರಕರಣದ ತನಿಖೆ ನಡೆಸಿರುವ ನಿವೃತ್ತ ನ್ಯಾ. ಮೈಕೆಲ್ ಡಿ ಕುನ್ಹಾ ನೇತೃತ್ವದ ಏಕಸದಸ್ಯ ತನಿಖಾ ಆಯೋಗ ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಈಗಾಗಲೇ ಸರ್ಕಾರಕ್ಕೆ ಸಲ್ಲಿಸಿದೆ.ಇದೀಗ ಸರ್ಕಾರಕ್ಕೆ ನ್ಯಾ. ಮೈಕಲ್ ಕುನ್ಹಾ ಸಲ್ಲಿಸಿದ ವರದಿಯಲ್ಲಿ ಸ್ಫೋಟಕ ಅಂಶ ಬಯಲಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಕರ್ತವ್ಯ ಲೋಪ ಮಾಡಿದ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆಗೆ ಶಿಫಾರಸು ಮಾಡಿದ್ದು, ಆರ್‌ಸಿಬಿ, ಡಿಎನ್‌ಎ, ಕೆಎಸ್‌ಸಿಎ ಮತ್ತು ಪೊಲೀಸರ ವಿರುದ್ಧ ದಂಡನೀಯ ಪ್ರಕರಣ ದಾಖಲು ಮಾಡಬಹುದು ಎಂದು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ಇದನ್ನೂ ಓದಿ:

ಘಟನೆಗೆ ಕೆಎಸ್‌ಸಿಎ, ಡಿಎನ್‌ಎ, ಆರ್‌ಸಿಬಿ ಹಾಗೂ ಪೊಲೀಸರು ನೇರ ಹೊಣೆಯಾಗಿದ್ದಾರೆ. ಕಾರ್ಯಕ್ರಮ ನಡೆಸುವುದು ಅಸಾಧ್ಯವೆಂದು ಗೊತ್ತಿದ್ದರೂ ಎಲ್ಲರೂ ಶಾಮೀಲಾಗಿ ಕಾರ್ಯಕ್ರಮ ನಡೆಸಿದರು. ಈ ಎಲ್ಲರ ಕರ್ತವ್ಯ ಲೋಪ, ನಿರ್ಲಕ್ಷ್ಯತನದ ಪರಮಾವಧಿ ಎದ್ದು ಕಾಣುತ್ತಿದೆ. ಬಂದೋಬಸ್ತ್ ವ್ಯವಸ್ಥೆ ಸಮರ್ಪಕವಾಗಿರಲಿಲ್ಲ ಎಂಬ ವಿಚಾರ ತನಿಖೆಯಲ್ಲಿ ತಿಳಿದು ಬಂದಿದೆ.

ಕ್ರೀಡಾಂಗಣದ ಒಳಗೆ 79 ಪೊಲೀಸರು ಮಾತ್ರ ಇದ್ದರು. ಹೊರಗೆ ಪೊಲೀಸರು ಇರಲಿಲ್ಲ. ತುರ್ತು ವಾಹನ, ಅಂಬುಲೆನ್ಸ್ ವ್ಯವಸ್ಥೆ ಅಪೂರ್ಣವಾಗಿತ್ತು. 3:25ಕ್ಕೆ ಕಾಲ್ತುಳಿತ ಸಂಭವಿಸಿದ್ದರೂ. 5:30ರವರೆಗೆ ಪೊಲೀಸ್ ಕಮಿಷನರ್‌ಗೆ ಮಾಹಿತಿ ಇಲ್ಲ. 4 ಗಂಟೆಗೆ ಜಂಟಿ ಪೊಲೀಸ್ ಅಯುಕ್ತರು ಕ್ರೀಡಾಂಗಣಕ್ಕೆ ಬಂದಿದ್ದರು. ಇದನ್ನೂ ಓದಿ: ಕಾಲ್ತುಳಿತ ದುರಂತ: ವರದಿ ಸಲ್ಲಿಸಿದ ಆಯೋಗ

ಈ ವರದಿಯನ್ನು ಸರ್ಕಾರದ ಸಚಿವ ಸಂಪುಟ ಅಂಗೀಕರಿಸಿದರೆ ದಾಖಲಾಗಿರುವ ಪ್ರಕರಣದಲ್ಲಿ ಈ ಅಧಿಕಾರಿಗಳನ್ನು ಆರೋಪಿಗಳಾಗಿ ಸೇರಿಸುವುದು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದೊಡ್ಡ ಮಟ್ಟದ ಕಾರ್ಯಕ್ರಮವನ್ನು ಮಾಡಿದ್ದು ಸರಿಯಲ್ಲ. ಗೇಟ್‌ಗಳು ಅತ್ಯಂತ ಚಿಕ್ಕದಾಗಿತ್ತು. ಕ್ರೀಡಾಂಗಣದಲ್ಲಿ ಫೈರ್ ಸೇಫ್ಟಿ ವ್ಯವಸ್ಥೆ ಇರಲಿಲ್ಲ. 1,650 ಪೊಲೀಸ್ ಅಧಿಕಾರಿಗಳು ಭದ್ರತೆಗೆ ನಿಯೋಜನೆ ಆಗಿತ್ತು ಎಂಬುದು ಸುಳ್ಳು. 800ಕ್ಕಿಂತ ಕಡಿಮೆ ಜನರ ಭದ್ರತೆಗೆ ನಿಯೋಜನೆ ಆಗಿದ್ದರು ಎಂದು ವರದಿಯಲ್ಲಿ ಉಲ್ಲೆಖ ಮಾಡಲಾಗಿದೆ.

 

 

About the Author

admin

Administrator

Visit Website View All Posts

Spread the love

Post navigation

Previous: ಲವಕುಶ ಉದ್ಯಾನವನ ಉದ್ಘಾಟನೆ
Next: ಕುರುಬರಿಗೆ ಅಕ್ಷರ ಹತ್ತಲ್ಲ, ಶಿಕ್ಷಣ ಏಕೆ ಎಂದು ನಮ್ಮ ಅಜ್ಜಿ ಹೇಳುತ್ತಿದ್ದರು: ಸಿಎಂ

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.