ಬೆಂಗಳೂರು: ಹಿರಿಯ ನಟಿ ಬಿ ಸರೋಜಾದೇವಿ ವಯೋಜಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಇವರ ನಿಧನಕ್ಕೆ ಚಿತ್ರರಂಗ ಸೇರಿದಂತೆ ರಾಜಕೀಯ ರಂಗದವರು ಕೂಡ ಸಂತಾಪ ಸೂಚಿಸಿದ್ದಾರೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ ಸರೋಜಾದೇವಿಯವರ ನಿಧಾನಕ್ಕೆ ಸಂತಾಪ ಸೂಚಿಸಿದ್ದಾರೆ.
ಎಕ್ಸ್ ಕಥೆಯಲ್ಲಿ ಸಂತಾಪ ಸೂಚಿಸಿರುವ ಅವರು, ಕನ್ನಡ ಚಿತ್ರರಂಗವು ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ ಸುಮಾರು 200 ಚಿತ್ರಗಳಲ್ಲಿ ನಟಿಸಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದರು ಎಂದು ಬರೆದುಕೊಂಡಿದ್ದಾರೆ. ಮಾತ್ರವಲ್ಲದೇ ಸರೋಜಾದೇವಿ ಎಂದಾಕ್ಷಣ ಕಿತ್ತೂರು ಚೆನ್ನಮ್ಮ, ಬಬ್ರುವಾಹನ, ಅಣ್ಣತಂಗಿ ಮುಂತಾದ ಚಿತ್ರಗಳಲ್ಲಿನ ಅವರ ಮನೋಜ್ಞ ಅಭಿನಯ ಕಣ್ಣಮುಂದೆ ಬರುತ್ತದೆ.
ಸದಭಿರುಚಿಯ ಚಿತ್ರಗಳ ಮೂಲಕ ಹಲವು ದಶಕಗಳ ಕಾಲ ಸಿನಿಪ್ರಿಯರನ್ನು ರಂಜಿಸಿದ್ದ ಅವರ ಅಗಲಿಕೆ ಭಾರತೀಯ ಚಿತ್ರರಂಗಕ್ಕಾದ ಬಹುದೊಡ್ಡ ನಷ್ಟವಾಗಿದ್ದು, ಸರೋಜಾದೇವಿಯವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುವೆ. ಅವರ ದುಃಖತಪ್ತ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಬರೆದುಕೊಂಡಿದ್ದಾರೆ.
