Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಶಕ್ತಿ ಯೋಜನೆ ದೇಶಕ್ಕೆ ಮಾದರಿ: ಡಿ.ಕೆ.ಶಿವಕುಮಾರ್
  • Bangalore
  • Front news
  • Politics
  • State

ಶಕ್ತಿ ಯೋಜನೆ ದೇಶಕ್ಕೆ ಮಾದರಿ: ಡಿ.ಕೆ.ಶಿವಕುಮಾರ್

admin July 14, 2025 1 minute read
Spread the love

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು ಇದರಲ್ಲಿ ಶಕ್ತಿ ಯೋಜನೆಯು ಬಹಳ ಪ್ರಮುಖ್ಯತೆಯನ್ನು ಪಡೆದುಕೊಂಡಿದೆ. ರಾಜ್ಯದ ಪ್ರತಿಯೊಬ್ಬ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಸುವ ಯೋಜನೆ ಇದಾಗಿದ್ದು ಈಗಾಗಲೇ ಶಕ್ತಿ ಯೋಜನೆಯಿಂದ ರಾಜ್ಯದ ಮಹಿಳಾ ಪ್ರಯಾಣಿಕರು 500 ಕೋಟಿ ಜನ ಮಹಿಳೆಯರು ಉಚಿತವಾಗಿ ಪ್ರಯಾಣ ಬೆಳೆಸಿದ್ದಾರೆ.

ಇನ್ನು ಶಕ್ತಿ ಯೋಜನೆಯ ಇತಿಹಾಸವನ್ನು ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾಂಗ್ರೆಸ್ ಸರ್ಕಾರದ ವತಿಯಿಂದ ಶಕ್ತಿ ಯೋಜನೆಯ ಸಂಭ್ರಮಾಚರಣೆಯನ್ನು ಆಚರಿಸಲಾಗುತ್ತಿದೆ.

500 ಕೋಟಿ ಟ್ರಿಪ್ ಗಳನ್ನು ಕಂಡಿರುವ ಶಕ್ತಿ ಯೋಜನೆ ಇಡೀ ದೇಶಕ್ಕೆ ಮಾದರಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಣ್ಣಿಸಿದರು.

ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣ 500 ಕೋಟಿ ಟ್ರಿಪ್ ಮುಟ್ಟಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ವಿಂಡ್ಸರ್ ವೃತ್ತದಲ್ಲಿ ಬಿಎಂಟಿಸಿ ಬಸ್ ನಲ್ಲಿ 500 ನೇ ಕೋಟಿಯ ಟಿಕೆಟ್ ಅನ್ನು ಮಹಿಳಾ ಪ್ರಯಾಣಿಕರಿಗೆ ಇಂದು (ಸೋಮವಾರ ಜು. 14) ವಿತರಿಸಿದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: ಇತಿಹಾಸ ಸೃಷ್ಟಿಸಿದ ಶಕ್ತಿ ಯೋಜನೆ..!

ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಎಲ್ಲಿಯವರೆಗೆ ದೇವರು ಶಕ್ತಿ ಹಾಗೂ ಜನ ಅಧಿಕಾರ ನೀಡುತ್ತಾರೋ ಅಲ್ಲಿಯತನಕ ಯೋಜನೆಗಳು ಮುಂದುವರೆಯುತ್ತವೆ ಎಂದರು.

ಕಾಂಗ್ರೆಸ್ ಪಕ್ಷ ಈ ದೇಶದ ಜನರಿಗೆ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ನೀಡಿದೆ. ಹಲಾವಾರು ಪಿಂಚಣಿ ಯೋಜನೆಗಳು, ನರೇಗಾ, ಬ್ಯಾಂಕ್ ರಾಷ್ಟ್ರೀಕರಣ ಸೇರಿದಂತೆ ನಮ್ಮ ಯೋಜನೆಗಳನ್ನು ಬಿಜೆಪಿ ಸೇರಿದಂತೆ ಯಾರೂ ಸಹ ನಿಲ್ಲಿಸಲು ಸಾಧ್ಯವಿಲ್ಲ. ಇವು ಜನರ ಹೃದಯ ಹಾಗೂ ಬದುಕಿಗೆ ಬೇಕಾದಂತಹ ಕಾರ್ಯಕ್ರಮಗಳು. ಇವು ನಿರಂತರವಾಗಿರುತ್ತವೆ ಎಂದರು.

ಈ ಯೋಜನೆಯಿಂದ ರಾಜ್ಯದ ಉದ್ದಗಲಕ್ಕೂ ಮಹಿಳೆಯರು ಉಚಿತವಾಗಿ ಸಂಚಾರ ಮಾಡಬಹುದು. ಯಾವುದೇ ಖರ್ಚು ಮಾಡದೇ ತಮ್ಮ ಪ್ರೀತಿಪಾತ್ರರ ಮನೆಗಳಿಗೆ ಹೋಗಬಹುದು.‌ ಕೆಲಸಕ್ಕೆ ಹೋಗುವ ಅನೇಕ ಮಹಿಳೆಯರಿಗೆ ಪ್ರತಿ ತಿಂಗಳು 500 ರಿಂದ‌ 1 ಸಾವಿರಕ್ಕೂ ಹೆಚ್ಚು ಹಣ ಉಳಿತಾಯವಾಗುತ್ತಿದೆ ಎಂದರು.

ಮಹಿಳೆಯೊಬ್ಬರು ಸಂತೋಷದಿಂದ ನನಗೆ ರೊಟ್ಟಿ, ಶೇಂಗಾ ಹೋಳಿಗೆ ನೀಡಿದರು. ನಮ್ಮ ಯೋಜನೆ ಬಗ್ಗೆ ಯಾರು ಎಷ್ಟೇ ಟೀಕೆ ಮಾಡಿದರೂ ಅವುಗಳು ಕಾಲಕ್ರಮೇಣ ಸತ್ತು ಹೋಗುತ್ತವೆ. ನಮ್ಮ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ.‌ ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿರುವ ಕಾರಣಕ್ಕೆ ನಮಗೆ ಹೆಚ್ಚು ಸಂತೋಷವಾಗಿದೆ. ಇದೆಲ್ಲವನ್ನು ಜಾರಿ ಮಾಡಲು ಜನ ನೀಡುರುವ ಶಕ್ತಿಯಿಂದ ನಮಗೆ ಬಲಬಂದಿದೆ ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಇತಿಹಾಸ ಸೃಷ್ಟಿಸಿದ ಶಕ್ತಿ ಯೋಜನೆ..!
Next: ಬಿ.ಸರೋಜಾದೇವಿ ಒಬ್ಬ ಮೇರು ನಟಿ: ಸಿಎಂ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.