ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚಿಗೆ ಕೊಲೆ, ದರೊಡೆ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿರುವ ಬೆನ್ನಲ್ಲೇ ಮತ್ತೆ ಇದೀಗ ಬೆಂಗಳೂರು ಜನರನ್ನ ಬೆಚ್ಚಿ ಬೀಳಿಸುವಂತೆ ಕೊಲೆಯೊಂದು ನಡೆದಿದೆ.
ಹೌದು, ರೌಡಿ ಶೀಟರ್ ಬಿಕ್ಳು ಅಲಿಯಾಸ್ ಶಿವ ಎಂಬುವವರ ಕೊಲೆ ನಡೆದಿದ್ದು, ಶಿವನ ಮನೆಯ ಮುಂದೆ ನಾಲ್ಕೈದು ಜನ ದುಷ್ಕರ್ಮಿಗಳು ಬಂದು ಮಾರಕ ಅಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇನ್ನು ಈ ಕೊಲೆಗೆ ಸಂಬಂಧಿಸಿದಂತೆ ಈಗಾಗಲೇ ನಾಲ್ಕು ಜನದ ಮೇಲೆ ಎಫ್ಐಆರ್ ದಾಖಲಾಗಿದ್ದು ಇದರಲ್ಲಿ ಪ್ರಮುಖವಾಗಿ ಕೆಆರ್ ಪುರಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವಂತಹ ಭೈರತಿ ಬಸವರಾಜ್ ಅವರ ವಿರುದ್ಧವೂ ಕೂಡ ಎಫ್ಐಆರ್ ದಾಖಲಾಗಿದೆ. ಬೈರತಿ ಬಸವರಾಜ್ ರನ್ನು A5 ಆರೋಪಿಯನ್ನಾಗಿ ಮಾಡಲಾಗಿದೆ.
ಜಮೀನು ವಿಚಾರಕ್ಕೆ ರೌಡಿಶೀಟರ್ ಶಿವಪ್ರಕಾಶ್ ಹಾಗೂ ಭೈರತಿ ಬಸವರಾಜ್, ಬೆಂಬಲಿಗರ ನಡುವೆ ಗಲಾಟೆ ಆಗಿತ್ತು ಎನ್ನಲಾಗಿದೆ. ಜಗದೀಶ್ ಎ1, ಕಿರಣ್ ಎ2 ವಿಮಲ್ ಎ3, ಅನಿಲ್ ಎ4 ಆರೋಪಿಗಳಾಗಿದ್ದಾರೆ. ಇದನ್ನೂ ಓದಿ: ತಂದೆಯನ್ನೇ ಕೊಂದ ಪಾಪಿ ಮಗ..!
ಕಿತ್ತಕನೂರು ಜಾಗದ ವಿಚಾರವಾಗಿ ಕೊಲೆ ನಡೆದಿರುವ ಆರೋಪ ಕೇಳಿ ಬಂದಿದೆ. ಸ್ಕಾರ್ಪಿಯೋದಲ್ಲಿ ಬಂದ ದುಷ್ಕರ್ಮಿಗಳು ಮಚ್ಚಿನಿಂದ ಹೊಡೆದಿದ್ದಾರೆ. ಕೊಲೆ ಮಾಡಿರುವ ಆರೋಪಿಗಳು ಹಲವು ಬಾರಿ ಮಗನಿಗೆ ಬೆದರಿಕೆ ಹಾಕಿದ್ದರು ಎಂದು ಶಿವನ ತಾಯಿ ತಿಳಿಸಿದ್ದಾರೆ. ಮಾಜಿ ಸಚಿವ ಬೈರತಿ ಬಸವರಾಜ್, ಜಗದೀಶ್ ಮತ್ತು ಇತರರಿಂದ ನನಗೆ ಪ್ರಾಣ ಬೆದರಿಕೆಯಿದೆ ಎಂದು ಹಲವು ಬಾರಿ ಮಗ ಹೇಳಿದ್ದ. ಬಸವರಾಜ್ ಕುಮ್ಮಕ್ಕಿನಿಂದಲೇ ಕೊಲೆ ನಡೆದಿದೆ ಎಂದು ಆರೋಪಿಸಿದ್ದಾರೆ.
ಮಗನ ಜೀವ ತೆಗೆಯಲು ಶಾಸಕ ಬೈರತಿ ಬಸವರಾಜ್ ಕುಮ್ಮಕ್ಕು ನೀಡಿದ್ದಾರೆ ಅಂತಾ ಆರೋಪಿಸಿ ರೌಡಿಶೀಟರ್ ತಾಯಿ ವಿಜಯಲಕ್ಷ್ಮಿ ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಶಾಸಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.
