ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ವಿರೋಧ ಪಕ್ಷದ ನಾಯಕರು ಟೀಕಿಸುತ್ತಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿರೋಧ ಪಕ್ಷದ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಎಲ್ಲ ಪಕ್ಷದವರು 5 ಗ್ಯಾರಂಟಿ ಯೋಜನೆಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಆದರೂ ಕೂಡ ಗ್ಯಾರಂಟಿ ಬಗ್ಗೆ ಟೀಕೆ ಮಾಡುವುದನ್ನು ಬಿಡುತ್ತಿಲ್ಲ. ಯಾರಿಗೆಲ್ಲ ಗ್ಯಾರಂಟಿ ಯೋಜನೆಗಳ ಸೌಲಭ್ಯ ಬೇಕಾಗಿಲ್ಲ ಅದನ್ನೆಲ್ಲ ನೀವು ಸರಕಾರಕ್ಕೆ ವಾಪಸ್ ನೀಡಿ ಎಂದು ವಿರೋಧ ಪಕ್ಷದ ನಾಯಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಬಿಬಿಎಂಪಿ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಅವರು ಮಾತನಾಡಿದ ಅವರು, ನಾವು ನೀಡಿದ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿರುವವರು ಲಾಭ ಪಡೆಯುತ್ತಲೇ ಇದ್ದಾರೆ. ಗ್ಯಾರಂಟಿ ಬೇಡವಾದ್ರೆ ಅದನ್ನು ಸರ್ಕಾರಕ್ಕೆ ವಾಪಸ್ ಕೊಡಿ. ಇದು ನನ್ನ ಸವಾಲು ಎಂದು ಸ್ಪಷ್ಟಪಡಿಸಿದರು.
ನಮ್ಮ ಯೋಜನೆಗಳು ಯುವಕರು ಮತ್ತು ಮಹಿಳೆಯರು ಈ ವರ್ಗದವರ ಪ್ರಗತಿಗೆ ತಲೆದೋರಿವೆ. ಹೀಗಾಗಿ ಗ್ಯಾರಂಟಿ ಸಮಿತಿಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಜವಾಬ್ದಾರಿ ನೀಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಸಿಎಂ ಮಾಧ್ಯಮ ಸಲಹೆಗಾರ ಅವರಿಗೆ ಸನ್ಮಾನ
ಟೀಕೆಗಿಂತ ಕಾರ್ಯ ಮುಖ್ಯ ಎಂದ ಅವರು, ವಿರೋಧ ಪಕ್ಷದ ಟೀಕೆಗಳು ಕಳೆದು ಹೋಗುತ್ತವೆ. ಆದರೆ ನಮ್ಮ ಕೆಲಸಗಳು ಉಳಿಯುತ್ತವೆ. ಪ್ರತಿ ವಾರ್ಡ್, ಪಂಚಾಯತ್ ಮಟ್ಟದಲ್ಲಿ ಗ್ಯಾರಂಟಿ ಸಮಾವೇಶಗಳನ್ನು ನಡೆಸುವ ಯೋಚನೆ ಇದೆ. ಕಾರ್ಯಕರ್ತರಲ್ಲಿ ಸ್ಪೂರ್ತಿಯ ಬೆಳಕು ತುಂಬುವುದು ನಮ್ಮ ಗುರಿ ಎಂದು ತಿಳಿಸಿದರು.
