Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಾಂಗ್ರೆಸ್ ಸರ್ಕಾರಕ್ಕೆ ಜನರು ಹಿಡಿ ಶಾಪ ಹಾಕ್ತಿದ್ದಾರೆ: ವಿಜಯೇಂದ್ರ
  • Bangalore
  • Politics
  • State

ಕಾಂಗ್ರೆಸ್ ಸರ್ಕಾರಕ್ಕೆ ಜನರು ಹಿಡಿ ಶಾಪ ಹಾಕ್ತಿದ್ದಾರೆ: ವಿಜಯೇಂದ್ರ

admin July 18, 2025 1 minute read
Spread the love

ಮೈಸೂರು: ಸಿದ್ದರಾಮಯ್ಯನವರು ತಮ್ಮ ಕುರ್ಚಿ ಉಳಿವಿಗೆ ಸಾಧನಾ ಸಮಾವೇಶ ಮಾಡುತ್ತಿದ್ದಾರೆ. ಅಲ್ಲದೇ ಅಹಿಂದ ಜನರ ಭಜನೆ ಮಾಡುತ್ತಿದ್ದು, ನಿಮ್ಮ ಮುಖವಾಡ ಇವತ್ತು ಕಳಚಿ ಬಿದ್ದಿದೆ. ಅಹಿಂದ ಸಮುದಾಯಗಳಿಗೆ ಸಿದ್ದರಾಮಯ್ಯನವರು ಯಾವುದೇ ರೀತಿಯ ನ್ಯಾಯ ಕೊಡಲು ಸಾಧ್ಯವಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದರು.

ಮೈಸೂರಿನಲ್ಲಿಂದು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ತಂತ್ರ- ಕುತಂತ್ರಗಳಿಗೆ ಅದರದ್ದೇ ಆದ ಇತಿಮಿತಿ ಇರುತ್ತದೆ. ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ಮಧ್ಯೆ ಕಾಂಗ್ರೆಸ್ಸಿನ ಹೈಕಮಾಂಡ್ ಮಟ್ಟದಲ್ಲಿ ಸಿಎಂ ಕುರ್ಚಿ ವಿಷಯದಲ್ಲಿ ಎರಡೂವರೆ ವರ್ಷ- 2.5 ವರ್ಷ ಎಂಬ ಒಪ್ಪಂದ ಆಗಿದೆ ಎಂದು ಕಾಂಗ್ರೆಸ್ ಮುಖಂಡರೇ ಹೇಳುತ್ತಾರೆ. ಈಗ ರಾಜೀನಾಮೆ ಕೊಡಲೇಬೇಕಾದ ಸನ್ನಿವೇಶ ನಿರ್ಮಾಣವಾಗಿದೆ ಎಂದರು.

ಸರಕಾರ ಬಂದು ಎರಡೂವರೆ ವರ್ಷ ಆಗಿದೆ. ಇವರೇನು ಸಾಧನೆ ಮಾಡಿದ್ದಾರೆ. ರಾಜ್ಯದ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಗ್ಯಾರಂಟಿಗಳಿಗೆ ಹಣ ಸಂಗ್ರಹವಾಗದೆ ಜಿಎಸ್‍ಟಿ ಮೂಲಕ ಬೀದಿ ವ್ಯಾಪಾರಿಗಳಿಗೂ ಬರೆ ಎಳೆಯುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು. ಇದನ್ನೂ ಓದಿ: ಥೈಲ್ಯಾಂಡ್‌ನಲ್ಲಿ ಕಾಟೇರ ಫುಲ್ ಜಾಲಿ ಜಾಲಿ..!

ಬಿಜೆಪಿ, ರಾಮನಾಥ ಕೋವಿಂದ್ ಅವರನ್ನು ಗೌರವಾನ್ವಿತ ರಾಷ್ಟ್ರಪತಿಗಳನ್ನಾಗಿ ಮಾಡಿದೆ. ಈಗ ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಅವರನ್ನು ಮಾನ್ಯ ರಾಷ್ಟ್ರಪತಿಗಳನ್ನಾಗಿ ಮಾಡಿದ್ದೇವೆ ಎಂದ ಅವರು, ಕಾಂಗ್ರೆಸ್, ಗಾಂಧಿ ಕುಟುಂಬವು ಹಿಂದೆ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಅವರನ್ನು ಅಪಮಾನ ಮಾಡಿ ಮುಖ್ಯಮಂತ್ರಿ ಗಾದಿಯಿಂದ ಕೆಳಗಿಳಿಸಿತ್ತು. ಇದನ್ನು ಸಿದ್ದರಾಮಯ್ಯನವರು ಮರೆತಿದ್ದರೂ ರಾಜ್ಯದ ಜನರು ಮರೆತಿಲ್ಲ. ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಬೇಕೆಂದು ಹಪಾಹಪಿ ಸಿದ್ದರಾಮಯ್ಯನವರಲ್ಲಿದೆ. ದೇವರಾಜ ಅರಸು ಅವರಿಗೆ ಕಾಂಗ್ರೆಸ್ ಪಕ್ಷ ಮಾಡಿದ ಅಪಮಾನವನ್ನು ಸಿದ್ದರಾಮಯ್ಯನವರು ನೆನಪಿಸಿಕೊಳ್ಳಲಿ ಎಂದರು.

About the Author

admin

Administrator

Visit Website View All Posts

Spread the love

Post navigation

Previous: ಥೈಲ್ಯಾಂಡ್‌ನಲ್ಲಿ ಕಾಟೇರ ಫುಲ್ ಜಾಲಿ ಜಾಲಿ..!
Next: ಅನುಶ್ರೀ ಮದುವೆಯಾಗುತ್ತಿರುವುದು ಲವ್ ಮ್ಯಾರೇಜಾ ಅಥವಾ ಅರೆಂಜ್ ಮ್ಯಾರೇಜ್?

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.