ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವಂತ ಎಂ ಸತೀಶ್ ರೆಡ್ಡಿ ಅವರು ಇಂದು (ಶನಿವಾರ ಜುಲೈ 19) ರಂದು ಕುಡ್ಲು ಭಾಗದ ಹಾಗೂ ಸೋಮಸಂದ್ರಪಾಳ್ಯದ SVR ಫ್ಲೋರಾ ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲಿನ ನಿವಾಸಿಗಳೊಂದಿಗೆ “ಜನ ಸ್ಪಂದನ” ಸಭೆ ನಡೆಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಸಂಬಂಧಿತ ಅಧಿಕಾರಿಗಳಿಗೆ ತಕ್ಷಣದ ಸ್ಪಂದನೆ ನೀಡುವಂತೆ ನಿರ್ದೇಶನ ನೀಡಿದರು.
ರಸ್ತೆ, ನೀರು ಸರಬರಾಜು, ಪಾರ್ಕಿಂಗ್, ವಿದ್ಯುತ್ ಹಾಗೂ ಇತರ ಮೂಲಭೂತ ಸೌಲಭ್ಯಗಳ ಕುರಿತಂತೆ ಹಲವು ಪ್ರಮುಖ ವಿಚಾರಗಳನ್ನು ಚರ್ಚಿಸಿ, ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕೊಡಿಸುವ ಭರವಸೆ ನೀಡಿದರು. ಇದನ್ನೂ ಓದಿ: ಪರಿಸರ ಹೆಸರಿನಲ್ಲಿ ಕಾಂಗ್ರೆಸ್ ಸಮಾವೇಶ: ಎಂ. ಸತೀಶ್ ರೆಡ್ಡಿ
ನಮ್ಮ ನಿತ್ಯದ ಕಾರ್ಯವೈಖರಿಯಲ್ಲಿಯೇ ಜನಸಾಮಾನ್ಯರ ದೈನಂದಿನ ಸಮಸ್ಯೆಗಳಿಗೆ ಸರಿಯಾದ ಸಮಾಧಾನ ಕಂಡು ಕೊಡುವುದು ಪ್ರಾಥಮಿಕ ಗುರಿಯಾಗಿದ್ದು, ನಿಮ್ಮ ನಂಬಿಕೆಗೆ ತಕ್ಕ ಸೇವೆಯನ್ನು ನಿರಂತರವಾಗಿ ನೀಡುತ್ತೇವೆ ಎಂದರು.
ಈ ಸಂದರ್ಭದಲ್ಲಿ ಮಾಜಿ ನಗರಸಭಾ ಸದಸ್ಯರಾದ ಶ್ರೀನಿವಾಸ್ ರೆಡ್ಡಿ ರವರು,ಸ್ಥಳೀಯ ಮುಖಂಡರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
