ಹೊಸಕೋಟೆ: ಹೊಸಕೋಟೆ ನಗರದ ಶ್ರೀ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ಬೃಹತ್ ಇ-ಸ್ವತ್ತು ಮತ್ತು ಹಕ್ಕುಪತ್ರ ವಿತರಣಾ ಸಮಾರಂಭವನ್ನು ಆಯೋಜಿಸಿ, ಅಪಾರ ಜನಸ್ತೋಮದ ಸಮ್ಮುಖದಲ್ಲಿ ಒಟ್ಟು 11,191 ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ.ಎಚ್.ಮುನಿಯಪ್ಪ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ, ಶಾಸಕರಾದ ಶ್ರೀ ನೆಲಮಂಗಲ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಸ್.ರವಿ ಸೇರಿದಂತೆ ಅನೇಕ ಮುಖಂಡರು, ಗಣ್ಯರು ಭಾಗವಹಿಸಿದ್ದರು.
