Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜಗದೀಪ್‌ ಧನಕರ್‌ ಆರೋಗ್ಯ ಚೆನ್ನಾಗಿದೆ, ಬಿಜೆಪಿ ಆರೋಗ್ಯವೇ ಚೆನ್ನಾಗಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌
  • Bangalore
  • Front news
  • Politics
  • State

ಜಗದೀಪ್‌ ಧನಕರ್‌ ಆರೋಗ್ಯ ಚೆನ್ನಾಗಿದೆ, ಬಿಜೆಪಿ ಆರೋಗ್ಯವೇ ಚೆನ್ನಾಗಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌

admin July 23, 2025 1 minute read
Spread the love

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರ ರಾಜೀನಾಮೆ ವಿಷಯ ಭಾರಿ ವಿವಾದಕ್ಕೀಡಾಗಿದೆ. ಅನಾರೋಗ್ಯ ನೆಪವೊಡ್ಡಿ ರಾಜೀನಾಮೆ ನೀಡಿರುವುದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ವಿಕಾಸ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು.

ಉಪರಾಷ್ಟ್ರಪತಿ ಅನಿರೀಕ್ಷಿತ ರಾಜೀನಾಮೆ‌ ಎಲ್ಲರನ್ನೂ ಅಚ್ಚರಿಗೊಳಿಸಿದೆ. ಬಿಜೆಪಿ ಆರೋಗ್ಯ ಚೆನ್ನಾಗಿಲ್ಲದಿರುವುದೇ ಇದಕ್ಕೆ ಕಾರಣ. ಬಿಜೆಪಿಯಲ್ಲಿರುವ ಸರ್ವಾಧಿಕಾರ ಧೋರಣೆಯೇ ಜಗದೀಪ್‌ ಧನಕರ್‌ ಅವರ ರಾಜೀನಾಮೆಗೆ ಪ್ರಮುಖ ಕಾರಣವಾಗಿದೆ ಎಂದು ಸಚಿವರು ಆರೋಪಿಸಿದರು.

ಇಡೀ ಪ್ರಕರಣವನ್ನು ಕೂಲಂಕಷವಾಗಿ ಪರಿಶೀಲಿಸಿದರೆ ಬಿಜೆಪಿಯಲ್ಲಿ ಏನೋ ಸರಿಯಲ್ಲಿ ಎಂಬುದು ಸ್ಪಷ್ಟವಾಗುತ್ತದೆ. ಇಡೀ ಪಕ್ಷ ಇಬ್ಬರ ಕೈಯಲ್ಲಿದೆ. ಸರ್ವಾಧಿಕಾರ ಹೆಚ್ಚಾಗಿರುವುದರಿಂದ ಬೇರೆ ಯಾವ ನಾಯಕರೂ ಮಾತನಾಡದೇ ಮುಗಮ್ಮಾಗಿದ್ದಾರೆ. ಜನರಿಗೆ ಇದು ಗೊತ್ತಾಗುವುದಿಲ್ಲ ಎಂದು ಬಿಜೆಪಿಯವರು ತಿಳಿದುಕೊಂಡಿದ್ದಾರೆ. ಆದರೆ ಇಡೀ ಪ್ರಕರಣದಿಂದ ಬಿಜೆಪಿಯ ಬಣ್ಣ ಸಂಪೂರ್ಣ ಬಯಲಾಗಿದೆ ಎಂದು ಡಾ.ಪಾಟೀಲ್‌ ದೂರಿದರು.

ಬಿಜೆಪಿಯಲ್ಲಿ ಪ್ರಜಾಪ್ರಭುತ್ವ, ನೀತಿ-ನಿಯಮಗಳು ಇಲ್ಲ. ಕೇಂದ್ರ ಸರ್ಕಾರ ಕೂಡ ಸಂವಿಧಾನ ಪಾಲನೆ ಮಾಡುತ್ತಿಲ್ಲ. ಸರ್ಕಾರವನ್ನು ಮುನ್ನಡೆಸುತ್ತಿರುವವರು ಇದುವರೆಗೂ ಒಂದಾದರೂ ಸುದ್ದಿಗೋಷ್ಠಿ ಮಾಡಿದ್ದಾರಾ? ಏಕಪಕ್ಷೀಯ ನಿರ್ಧಾರಗಳೇ ಹೆಚ್ಚಾಗಿ ತೆಗೆದುಕೊಳ್ಳಲಾಗುತ್ತದೆ. ಇಂಥ ಅಪಸವ್ಯಗಳಿಂದಲೇ ಬಿಜೆಪಿಯಲ್ಲಿ ಅನಾರೋಗ್ಯ ಪರಿಸ್ಥಿತಿ ಇದೆ ಎಂದು ಸಚಿವರು ಟೀಕಿಸಿದರು.

About the Author

admin

Administrator

Visit Website View All Posts

Spread the love

Post navigation

Previous: ಮಲೆನಾಡು ವ್ಯಾಪ್ತಿಯಲ್ಲಿ ಆರೋಗ್ಯ ಕೇಂದ್ರವಾಗಲಿರುವ ಶಿವಮೊಗ್ಗ
Next: ಸಿಹಿ ವಿತರಿಸಿದ ಕಾಂಗ್ರೆಸ್‌ ಕಾರ್ಯಕರ್ತರು

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.