ಗುಡಿಬಂಡೆ: ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಸಹಯೋಗದಲ್ಲಿ ನಾಗರಿಕರ ಗುರುತಿನ ಚೀಟಿಯನ್ನು ವಿತರಿಸಲಾಯಿತು.
ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ವತಿಯಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದವರಿಗೆ ಈ ಗುರುತಿನ ಚೀಟಿ ವಿತರಣೆ ಮಾಡಲಾಯಿತು. ಈ ಗುರುತಿನ ಚೀಟಿಯು ವಿಮಾನ, ರೈಲು, ಬಸ್, ಆದಾಯ ಪ್ರಮಾಣಪತ್ರ, ಪಿಂಚಣಿ,ಹೀಗೆ ಹಲವು ರಿಯಾಯಿತಿ ಸೌಲಭ್ಯಗಳನ್ನು ಪಡೆಯಲು ಬಳಸಬಹುದು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷರು ವಿಕಾಸ್ ರವರು ತಿಳಿಸಿದರು.
ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಹಾಗೂ ವಿಕಲಚೇತನ ಪುನರ್ವಸತಿ ಕೇಂದ್ರ ಮೂಲಕ 60 ವರ್ಷ ಮೇಲ್ಪಟ್ಟ ಎಲ್ಲ ಪುರುಷ ಮತ್ತು ಮಹಿಳಾ ಹಿರಿಯ ನಾಗರಿಕರ ಮಾಹಿತಿ ಪಡೆದು ಗುರುತಿನ ಚೀಟಿ ವಿತರಣೆ ಮಾಡಲಾಗುತ್ತಿದೆ. ಗುಡುಬಂಡೆ ತಾಲೂಕು ಕಚೇರಿ ಆವರಣದಲ್ಲಿ 8 ಜನ ಹಿರಿಯ ನಾಗರಿಕರಿಗೆ ಗುರುತಿನ ಚೀಟಿಯನ್ನು ವಿತರಿಸಲಾಯಿತು. ಇದನ್ನೂ ಓದಿ: ಕೆಕೆಆರ್ಡಿಬಿಗೆ 5 ಸಾವಿರ ಕೋಟಿ ಅನುಮೋದನೆ
ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರ ನೋಡಲ್ ಅಧಿಕಾರಿ ಗಣೇಶ್. ಆರ್ ಜಿಲ್ಲಾ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಜಿಲ್ಲಾ ಸಂಯೋಜಕ ಶ್ರೀನಿವಾಸ ಎಂ, ಹಿರಿಯ ನಾಗರಿಕರಾದ ನಾರಾಯಣಪ್ಪ, ನರಸಿಂಹಪ್ಪ, ಅಶ್ವತ್ ರೆಡ್ಡಿ, ಗಂಗರಾಜು, ಸುಬ್ಬರಾಯಪ್ಪ ಮತ್ತತರರು ಹಾಜರಿದ್ದರು.
