Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಶಿವಲಿಂಗೇಗೌಡರಿಗೆ ರಾಜಕೀಯ ಭವಿಷ್ಯವಿದೆ: ಸಿಎಂ
  • Politics
  • State

ಶಿವಲಿಂಗೇಗೌಡರಿಗೆ ರಾಜಕೀಯ ಭವಿಷ್ಯವಿದೆ: ಸಿಎಂ

admin July 26, 2025 1 minute read
Spread the love

ಅರಸಿಕೆರೆ: ಶಿವಲಿಂಗೇಗೌಡರು ಕ್ಷೇತ್ರದ ಜನಪರ – ಅಭಿವೃದ್ಧಿ ಕೆಲಸ ಮಾಡುವುದರಲ್ಲಿ, ವಿಧಾನಸಭೆಯಲ್ಲಿ ಪಕ್ಷ ಮತ್ತು ಸರ್ಕಾರದ ಕಾರ್ಯಗಳನ್ನು ಸಮರ್ಥವಾಗಿ ಮಂಡಿಸುವುದರಲ್ಲೂ ಮುಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಅರಸಿಕೆರೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ₹148 ಕೋಟಿ ವೆಚ್ಚದಲ್ಲಿ10 ಕೆರೆಗಳ ನೀರು ತುಂಬಿಸುವ, ಕುಡಿಯುವ ನೀರು ಕೊಡುವ ಪುಣ್ಯದ ಕೆಲಸವನ್ನು ಶಿವಲಿಂಗೇಗೌಡರು ಮಾಡಿದ್ದಾರೆ. 4 ಬಾರಿ ಶಾಸಕರಾಗಿರುವ ಶಿವಲಿಂಗೇಗೌಡರು ಮುಂದಿನ ಚುನಾವಣೆಯಲ್ಲೂ ಗೆಲ್ಲುವುದು ಶತಸಿದ್ಧ ಎಂದರು.

ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ಇಡಿ ದೇಶದಲ್ಲಿ ನಂ. 1 ಆಗಿದೆ. ಇದಕ್ಕೆ ಪ್ರಮುಖ ಕಾರಣ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿರುವುದು. ಕೊಳ್ಳುವ ಶಕ್ತಿ ಹೆಚ್ಚಾಗಲು ನಮ್ಮ ಗ್ಯಾರಂಟಿ ಯೋಜನೆಗಳು ಪ್ರಮುಖ ಕಾರಣ. ಬಿಜೆಪಿಯವರಿಗೆ ಆರ್ಥಿಕತೆ ಅರ್ಥ ಆಗುವುದಿಲ್ಲ. ಅದಕ್ಕೇ ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು, ಅಪಪ್ರಚಾರ ಮಾಡುತ್ತಿದ್ದಾರೆ. ರಾಜಕೀಯ ಪ್ರೇರಿತ ಸುಳ್ಳುಗಳನ್ನು ಹೇಳಿ ರಾಜ್ಯದ ಜನರ ದಾರಿ ತಪ್ಪಿಸುವ ಯತ್ನ ಮಾಡಿದರೂ ರಾಜ್ಯದ ಜನತೆ ಯಾಮಾರುವುದಿಲ್ಲ ಎಂದರು. ಇದನ್ನೂ ಓದಿ: ನಮ್ಮ ಯೋಜನೆಗಳ ಮುಂದೆ ಟೀಕೆಗಳು, ಅಪಪ್ರಚಾರ ಮಂಡಿಯೂರಿವೆ: ಸಿಎಂ

ಸರ್ಕಾರದ ಸಾಧನಾ ಸಮಾವೇಶದಲ್ಲಿ ಲಕ್ಷ ಲಕ್ಷ ಜನ ಫಲಾನುಭವಿಗಳು ಸೇರಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಇದು ನುಡಿದಂತೆ ನಡೆದ ನಮ್ಮ ಸರ್ಕಾರದ ಸಾಧನೆ. ನಾವು ಅಭಿವೃದ್ಧಿ ಯೋಜನೆಗಳಿಗೆ 1.20 ಲಕ್ಷ ಕೋಟಿ ಖರ್ಚು ಮಾಡುವುದರ ಜೊತೆಗೆ ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ಖರ್ಚು ಮಾಡಿ ಜನರ ಮನೆ ಬಾಗಿಲಿಗೆ ಅಭಿವೃದ್ಧಿ ಕಾರ್ಯಗಳನ್ನು ತಲುಪಿಸಿದ್ದೇವೆ.

ಶಿವಲಿಂಗೇಗೌಡರಿಗೆ ರಾಜಕೀಯ ಭವಿಷ್ಯವಿದೆ. ಮಂತ್ರಿಯಾಗುವ ಎಲ್ಲಾ ಅರ್ಹತೆ ಹೊಂದಿದ್ದಾರೆ. ಜೊತೆಗೆ ಕ್ಷೇತ್ರದ ಜನರ ಆಶೀರ್ವಾದವೂ ಗಟ್ಟಿಯಾಗಿದೆ. ಈ ಕಾರಣಕ್ಕೇ ನಾಲ್ಕು ಬಾರಿ ಗೆದ್ದಿರುವ ಶಿವಲಿಂಗೇಗೌಡರು ಮುಂದಿನ ಬಾರಿಯೂ ಗೆದ್ದು ಬರುತ್ತಾರೆ. ಆದರೆ ಕೆಲವೊಂದು ರಾಜಕೀಯ ಸಂಗತಿಗಳನ್ನು ಬಹಿರಂಗವಾಗಿ ಚರ್ಚಿಸಲು ಸಾಧ್ಯವಿಲ್ಲ.

 

About the Author

admin

Administrator

Visit Website View All Posts

Spread the love

Post navigation

Previous: ನಮ್ಮ ಯೋಜನೆಗಳ ಮುಂದೆ  ಟೀಕೆಗಳು, ಅಪಪ್ರಚಾರ ಮಂಡಿಯೂರಿವೆ: ಸಿಎಂ
Next: ಪತ್ರಕರ್ತರು ಧ್ವನಿ ಇಲ್ಲದವರ ಪರ ನಿಲ್ಲಲಿ; ಲಲಿತಾ ಅನಪೂರ

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.