Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪತ್ರಕರ್ತರು ಧ್ವನಿ ಇಲ್ಲದವರ ಪರ ನಿಲ್ಲಲಿ; ಲಲಿತಾ ಅನಪೂರ
  • State

ಪತ್ರಕರ್ತರು ಧ್ವನಿ ಇಲ್ಲದವರ ಪರ ನಿಲ್ಲಲಿ; ಲಲಿತಾ ಅನಪೂರ

admin July 26, 2025
Spread the love

ಶಹಾಪುರ: ಪತ್ರಿಕೋದ್ಯಮ ಸಮಾಜದ 4ನೇ ಅಂಗವಾಗಿದೆ. ಸಮಾಜಮುಖಿ ಕಾರ್ಯಗಳಲ್ಲಿ ಪತ್ರರ್ತರ ಕೊಡುಗೆ ಅಪಾರವಾಗಿದೆ. ಧ್ವನಿಯಿಲ್ಲದವರ ಪರವಾಗಿ ಪತ್ರಕರ್ತರು ನಿಲ್ಲಬೇಕು ಎಂದು ನಗರಸಭೆ ಅಧ್ಯಕ್ಷೆ ಲಲಿತಾ ಅನಪೂರ ಹೇಳಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಮತ್ತು ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಜನರ ಸಮಸ್ಯೆಗಳ ಕುರಿತು ವರದಿ ಮಾಡುವ ಮೂಲಕ ಪತ್ರಕರ್ತರು ಸಮಾಜದ ಬೆನ್ನೆಲುಬಾಗಿದ್ದಾರೆ. ವಯುಕ್ತಿಕ ಜೀವನ ಬದಿಗಿಟ್ಟು ನಿತ್ಯ ಕೆಲಸ ಮಾಡುತ್ತಾರೆ. ಅವರ ಸೇವೆ ಅನನ್ಯವಾಗಿದೆ ಎಂದು ತಿಳಿಸಿದರು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಶರಣಪ್ಪ ಮಾನೇಗಾರ ಮಾತನಾಡಿ, ಸಮಾಜದ ತಪ್ಪುಗಳನ್ನು ಪತ್ರಿಕಾರಂಗ ತಿದ್ದುವ ಕೆಲಸ ಹಾಗೂ ಧ್ವನಿ ಇಲ್ಲದವರ ಪರವಾಗಿ ಪತ್ರಿಕಾರಂಗ ಕೆಲಸ ಮಾಡಬೇಕು. ಆದರೆ, ಪತ್ರಿಕೋದ್ಯಮ ಜಾತಿಯ ಆಧಾರದ ಮೇಲೆ ಧರ್ಮದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವುದು ಸರಿಯಲ್ಲ ಎಂದರು.

ಡಿಡಿಯು ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಡಾ. ಭೀಮಣ್ಣ ಮೇಟಿ, ಖ್ಯಾತ ಹಾಸ್ಯ ಕಲಾವಿದ ಬಸವರಾಜ ಮಾಮನಿ, ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಭವಾನಿಸಿಂಗ್ ಠಾಕೂರು ಮಾತನಾಡಿದರು.

ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಶೀಘ್ರದಲ್ಲಿಯೇ ಜಿಲ್ಲಾ ಕೇಂದ್ರದ 36 ಜನ ಪತ್ರಕರ್ತರಿಗೆ ನಗರಸಭೆ ವತಿಯಿಂದ ನಿವೇಶನ ಮಂಜೂರಾಗಿ ಆಗಲಿವೆ. ಬಹುದಿನಗಳ ಬೇಡಿಕೆ ಈಡೇರಲಿದೆ ಎಂದರು.
ಸಂಘದ ರಾಜ್ಯ ಪರಿಷತ್ತಿನ ಸದಸ್ಯ ರಾಘವೇಂದ್ರ ಕಾಮನಟಗಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ವಾರ್ತಾ ಇಲಾಖೆಯಲ್ಲಿ ವಾಹನ ಚಾಲಕರಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತಿ ಹೊಂದಿದ ಗುರುನಾಥ ಅವರಿಗೆ ಸಂಘದಿಂದ ಸನ್ಮಾನಿಸಲಾಯಿತು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರಾಘವೇಂದ್ರ ಅಳ್ಳಳ್ಳಿ, ಜೆಡಿಎಸ್ ಯುವ ಮುಖಂಡ ಬಂದಪ್ಪ ಅರಳಿ, ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಕಲಾಲ, ಪತ್ರಕರ್ತ ನರಸಪ್ಪ ನಾರಾಯಣನೋರ್, ವಿಶಾಲ್ ದೋರನಹಳ್ಳಿ ಇದ್ದರು. ಇದನ್ನೂ ಓದಿ: ಶಿವಲಿಂಗೇಗೌಡರಿಗೆ ರಾಜಕೀಯ ಭವಿಷ್ಯವಿದೆ: ಸಿಎಂ

ಪ್ರಶಸ್ತಿ ಜೊತೆಗೆ ನಗದು ಪುರಸ್ಕಾರ:

ಪತ್ರಕರ್ತರಾದ ಬಾಲಪ್ಪ ಕುಪ್ಪಿಗೆ ದಿ. ನಿಂಗಯ್ಯ ಕರೇಗಾರ ಸ್ಮರಣಾರ್ಥ, ದಯಾನಂದ ಹಿರೇಮಠ ಅವರಿಗೆ ದಿ. ಗೌತಮ ಚಿಕಣಿ ಸ್ಮರಣಾರ್ಥ, ಮಹೇಶ್ ಗಣೇರ್ ಅವರಿಗೆ ದಿ. ರಾಧಾಬಾಯಿ ಮತ್ತು ಶ್ಯಾಮರಾವ್ ಜಹಗೀರದಾರ, ಮಲ್ಲಿಕಾರ್ಜುನ ಆಶನಾಳ ಅವರಿಗೆ ದಿ. ಚಂದ್ರಭಟ್ಟ ಜೋಶಿ ಯಾಳಗಿ, ಮಲ್ಲಿಕಾರ್ಜುನ ಕಾಡಂನೋರ್ ದಿ. ವಾಮಾನಾಚಾರ್ಯ ಪುರೋಹಿತ ಸ್ಮರಣಾರ್ಥ, ಮಂಜುನಾಥ ಎಸ್ ಬಿರಾದಾರ ಅವರಿಗೆ ದಿ. ಬಸಪ್ಪ ಅಂಗಡಿ ಹಾಗೂ ದಿ. ಕಮಲಮ್ಮ ಅಂಗಡಿ ಸ್ಮರಣಾರ್ಥ, ಆನಂದ ಗೊರ್ಕಲ್ ಅವರಿಗೆ ದಿ. ಪದ್ಮಾವತಿ ಮತ್ತು ದಿ. ಗುರುಸ್ವಾಮಿ ಪೋಲಂಪಲ್ಲಿ ದೋರನಹಳ್ಳಿ ಸ್ಮರಣಾರ್ಥ, ಬಸವರಾಜ ಕರೇಗಾರ ಅವರಿಗೆ ದಿ. ನಾಗಪ್ಪ ಮಾಸ್ಟರ್ ಸೇಡಂ ಸ್ಮರಣಾರ್ಥ ಜಿಲ್ಲಾ ಮಟ್ಟದ ಪ್ರಶಸ್ತಿ ಜೊತೆಗೆ ತಲಾ 2 ಸಾವಿರ ರೂಪಾಯಿ ನಗದು ನೀಡಿ ಸನ್ಮಾನಿಸಲಾಯಿತು.
ಪತ್ರಕರ್ತ ಹನುಮಂತು ಪಿ. ಅವರಿಗೆ ದಿ. ಸಾಹು ಮುರಾರಿರಾವ್ ಭೀ. ಶಿಂಧೆ ಸ್ಮರಣಾರ್ಥ ಮತ್ತು ಪತ್ರಿಕಾ ವಿತರಕ ಸಾಹೇಬಗೌಡ ಕಲಾಲ್ ಅವರಿಗೆ ದಿ. ಭೀಮರಾಯ ಕಲಾಲ್ ಸ್ಮರಣಾರ್ಥ ಪ್ರಶಸ್ತಿ ಜೊತೆಗೆ ಉಭಯರಿಗೆ 5 ಸಾವಿರ ರೂ. ನಗದು ನೀಡಿ ಗೌರವಿಸಲಾಯಿತು.

About the Author

admin

Administrator

Visit Website View All Posts

Spread the love

Post navigation

Previous: ಶಿವಲಿಂಗೇಗೌಡರಿಗೆ ರಾಜಕೀಯ ಭವಿಷ್ಯವಿದೆ: ಸಿಎಂ
Next: ರಾಜ್ಯಮಟ್ಟದ ಸಮಾವೇಶಕ್ಕೆ ಸಚಿವರಿಂದ ಚಾಲನೆ

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.