ಬೆಂಗಳೂರು: ಜೆಡಿಎಸ್ ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾ*ಚಾರ ವ್ಯಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜನಪ್ರತಿನಿಧಿಗಳ ಕೋರ್ಟ್ ಮಹತ್ವದ ಪ್ರಕಟಿಸಿದ್ದು ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರು ಆರೋಪಿಗೆ ಎಂದು ಕೋರ್ಟ್ ತೀರ್ಪನ್ನು ನೀಡಿದೆ.
ಇನ್ನು ಈ ತೀರ್ಪಿಗೆ ಸಂಬಂಧಿಸಿದಂತೆ ಕನ್ನಡ ಚಿತ್ರರಂಗದ ಖ್ಯಾತ ನಟಿ ರಮ್ಯಾ ಅವರು ಪ್ರತಿಕ್ರಿಯೆಸಿದ್ದಾರೆ. ಈ ಕುರಿತು ತಮ್ಮ instagram ಖಾತೆಯಲ್ಲಿ ಬರೆದುಕೊಂಡಿರುವ ಅವರು, ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದಿರುವ ಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದಾರೆ.
ಪ್ರಜ್ವಲ್ ದೋಷಿ ಎಂದು ನ್ಯಾ. ಗಜಾನನ ಭಟ್ ಭಟ್ ಅವರಿದ್ದ ಪೀಠ ತೀರ್ಪು ನೀಡಿದೆ. ತೀರ್ಪು ಪ್ರಕಟಿಸುವ ವೇಳೆ ಪ್ರಜ್ವಲ್ ರೇವಣ್ಣ ಕೂಡ ಕೋರ್ಟ್ ಹಾಲ್ನಲ್ಲಿ ಹಾಜರಿದ್ದರು. ಶಿಕ್ಷೆಯ ಪ್ರಮಾಣ ನಾಳೆ ಪ್ರಕಟವಾಗಲಿದೆ. ಕೋರ್ಟ್ ದೋಷಿ ಎಂದು ತೀರ್ಪು ನೀಡುವ ವೇಳೆ ಪ್ರಜ್ವಲ್ ರೇವಣ್ಣ ಕಣ್ಣಿರಿಟ್ಟಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದರೆ ಕನಿಷ್ಠ 10 ವರ್ಷ, ಗರಿಷ್ಟ ಜೀವಾವಧಿ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಕಳೆದ 14 ತಿಂಗಳಿನಿಂದ ಸೆರೆವಾಸದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದಲೂ ಈ ತೀರ್ಪು ಮಹತ್ವ ಪಡೆದಿದೆ. ಈ ಪ್ರಕರಣ ಅಲ್ಲದೇ ಇನ್ನೂ 2 ಪ್ರಕರಣದಲ್ಲಿ ತೀರ್ಪು ಬರಬೇಕಿದೆ. ಇದನ್ನೂ ಓದಿ: Breaking news: ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಿದ ಕೋರ್ಟ್
