ಬೆಂಗಳೂರು: ಅಂತೂ ಇಂತೂ ಬಿಬಿಎಂಪಿ ಚುನಾವಣೆಗೆ ಮುಹೂರ್ತ ಕೂಡಿ ಬಂದಂತೆ ಕಾಣುತ್ತಿದೆ. ನವೆಂಬರ್ 2025ನೇ ಸಾಲಿನಲ್ಲಿಯೇ ಬಿಬಿಎಂಪಿ ಚುನಾವಣೆ ನಡೆಸಲಾಗುವುದು ಎಂದು ಇದೀಗ ಬಿಗ್ ಅಪ್ಡೇಟ್ ಒಂದು ಹೊರ ಬಿದ್ದಿದೆ.
ಹೌದು, ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟಿಗೆ ಅಫಿಡವಿಟ್ ಸಲ್ಲಿಸಿದೆ ಎಂದು ತಿಳಿದುಬಂದಿದೆ. ಬರುವ ನವಂಬರ್ ಒಳಗಾಗಿ ಅಥವಾ ನವಂಬರ್ ತಿಂಗಳಲ್ಲಿ ಬಿವಿಎಂಪಿ ಚುನಾವಣೆ ನಡೆಸಲಾಗುವುದು ಎಂದು ಕರ್ನಾಟಕ ಸರ್ಕಾರ ಮಾಹಿತಿ ನೀಡಿದೆ.
ಇನ್ನು ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದ್ದು, ಅಷ್ಟರಲ್ಲಿ ಲಿಖಿತ ದಾಖಲೆಯನ್ನು ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್ಮಾಲ್ಯ ಬಾಗ್ಚಿ ಅವರಿರುವ ಪೀಠವು ಹಿರಿಯ ವಕೀಲ ಎ.ಎಂ ಸಿಂಘ್ವಿ ಮತ್ತು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರಿಗೆ ಸೂಚಿಸಿದೆ.
ಬಿಬಿಎಂಪಿ ವಾರ್ಡ್ ವಿಭಜನೆ, ಗಡಿ ನಿರ್ಣಯ, ಪರಿಷ್ಕರಣೆ, ಮೀಸಲಾತಿ ಮತ್ತು ಮತದಾರರ ಪಟ್ಟಿಯ ಸಿದ್ಧತೆಗೆ ಸಂಬಂಧಿಸಿದಂತೆ ದಾಖಲೆಗಳು ಒಳಗೊಂಡಿವೆ. ಕರ್ನಾಟಕ ಸರ್ಕಾರ ಸಲ್ಲಿರುವ ಅಫಿಡವಿಟ್ನಲ್ಲಿ, ನವೆಂಬರ್ ವೇಳೆಗೆ ಎಲ್ಲ ಪ್ರಕ್ರಿಯೆ ಮುಗಿಸುವುದಾಗಿ ಮಾಹಿತಿ ನೀಡಿದ್ದು, ಈಗಾಗಲೇ ಶೇ. 50 ರಷ್ಟು ಕ್ರಮಗಳು ಪೂರ್ಣಗೊಂಡಿವೆ ಎಂದು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಇನ್ಮುಂದೆ ಓಲಾ, ಊಬರ್ ಮಾದರಿಯಲ್ಲೇ ಆಂಬುಲೆನ್ಸ್ ಬುಕ್ ಮಾಡಬಹುದು!
ಒಟ್ಟಿನಲ್ಲಿ ಇದೇ ನವಂಬರ್ ತಿಂಗಳಿನಲ್ಲಿ ಬಿಬಿಎಂಪಿ ಚುನಾವಣೆಗೆ ಮುಹೂರ್ತ ಕೂಡಿಬಂದಿರುವುದಂತೂ ಅದೆಷ್ಟು ಬಿಬಿಎಂಪಿಯ ಎಲೆಕ್ಷನ್ ಎದುರಿಸುವ ಅಭ್ಯರ್ಥಿಗಳಿಗೆ ಇದು ಮಹತ್ವದ ಮಾಹಿತಿಯಾಗಿದೆ.
