Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಮುಂದೂಡಿಕೆ: ಡಿಕೆಶಿ
  • Bangalore
  • Politics
  • State

ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಮುಂದೂಡಿಕೆ: ಡಿಕೆಶಿ

admin August 4, 2025 1 minute read
WhatsApp Image 2025-08-04 at 16.41.15
Spread the love

ಬೆಂಗಳೂರು: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನಕ್ಕೆ 3 ದಿನಗಳ ಶೋಕಾಚರಣೆ ಹಿನ್ನೆಲೆಯಲ್ಲಿ ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದ ಪ್ರತಿಭಟನಾ ಸಭೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಸೋಮವಾರ ಮಾತನಾಡಿದ ಶಿವಕುಮಾರ್ ಅವರು ಈ ವಿಚಾರ ತಿಳಿಸಿದರು.

ಶಿಬು ಸೊರೇನ್ ಬುಡಕಟ್ಟು ಸಮುದಾಯದ ಹಿರಿಯ ನಾಯಕರು. ಕಾಂಗ್ರೆಸ್ ಪಕ್ಷದ ಬಹುಕಾಲದ ಮೈತ್ರಿ ನಾಯಕರು. ಅವರಿಗೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ಶಿಬು ಸೊರೇನ್ ಅವರಿಗೆ ಗೌರವ ಸಲ್ಲಿಸಬೇಕು. ಅವರ ಅಂತ್ಯಕ್ರಿಯೆ ಮಂಗಳವಾರ (ನಾಳೆ) ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಆತುರದಲ್ಲಿ ಮಾಡುವುದು ಬೇಡ ಎಂಬ ಕಾರಣಕ್ಕೆ ಈ ತೀರ್ಮಾನಕ್ಕೆ ಬರಲಾಗಿದೆ. ಶೋಕಾಚರಣೆ ಆಚರಿಸುವ ದಿನ ದೇಶಕ್ಕೆ ಒಂದು ಸಂದೇಶ ನೀಡುವ ಕಾರ್ಯಕ್ರಮ ಬೇಡ ಎಂದು ನಿರ್ಧರಿಸಿದ್ದೇವೆ. ಈ ವಿಚಾರವಾಗಿ ನಮ್ಮ ನಾಯಕರ ಜೊತೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಮಂಗಳವಾರದ ಕಾರ್ಯಕ್ರಮಕ್ಕೆ ಮಾಡಿಕೊಂಡಿರುವ ಸಿದ್ಧತೆ ಹಾಗೇ ಮುಂದುವರಿಸಿಕೊಂಡು ಹೋಗಬೇಕು ಎಂದು ಪಕ್ಷದ ನಾಯಕರು, ಶಾಸಕರು, ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ. 8ರಂದು ಅದೇ ಸ್ಥಳದಲ್ಲಿ, ಅದೇ ಸಮಯಕ್ಕೆ ನಡೆಯಲಿದೆ. ನಮ್ಮ ಕಾರ್ಯಕರ್ತರು, ಮುಖಂಡರು ಹಾಗೂ ಮತದಾರರು ಈ ಹೋರಾಟದಲ್ಲಿ ಭಾಗವಹಿಸಲು ಬಹಳ ಉತ್ಸುಕರಾಗಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ನಿಗದಿಯಾಗಿದ್ದ ರಾಹುಲ್ ಗಾಂಧಿ ಅವರ ಮಾಧ್ಯಮಗೋಷ್ಠಿಯನ್ನು ಕೂಡ ಮುಂದೂಡಲಾಗಿದ್ದು, ನಾಳೆ ಅಂತ್ಯಕ್ರಿಯೆ ನಂತರ ಇದರ ಬಗ್ಗೆ ಚರ್ಚಿಸಿ ಮಾಹಿತಿಯನ್ನು ಅವರು ತಿಳಿಸಲಿದ್ದಾರೆ ಎಂದು ತಿಳಿಸಿದರು.

ಶಿಬು ಸೊರೇನ್ ಅವರು ಕಷ್ಟ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ನಿಂತಿದ್ದಾರೆ. ನರಸಿಂಹ ರಾವ್ ಅವರ ಕಾಲ ಸೇರಿದಂತೆ ಎಲ್ಲಾ ಸಮಯದಲ್ಲೂ ಕಾಂಗ್ರೆಸ್ ಪಕ್ಷದ ಪರ ಬಂಡೆಯಂತೆ ನಿಂತದ್ದರು. ಪಕ್ಷದ ಸಿದ್ಧಾಂತದ ಜೊತೆ ನಿಂತು ನಮ್ಮ ಸರ್ಕಾರಕ್ಕೆ ಅವರು, ಅವರ ಸರ್ಕಾರಕ್ಕೆ ನಾವು ಬೆಂಬಲವಾಗಿ ನಿಂತಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಾವು ಪ್ರಾರ್ಥಿಸುತ್ತೇವೆ ಎಂದರು. ಇದನ್ನೂ ಓದಿ: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪ್ರತಾಪ್ ಸಿಂಹ ಕಿಡಿ

ಆಗಸ್ಟ್ 8ರಂದು ವರಮಹಾಲಕ್ಷ್ಮಿ ಹಬ್ಬವಿದ್ದರೂ ಪಕ್ಷದ ಕೆಲಸಕ್ಕೆ ಆದ್ಯತೆ ನೀಡುತ್ತಿದ್ದೇವೆ. ಹಬ್ಬದ ಪ್ರಯುಕ್ತ ಪೂಜೆ ಮಾಡಲು ಹಾಗೂ ಪ್ರಾರ್ಥನೆ ಮಾಡಲು ನಾವು ಯಾರಿಗೂ ಅಡ್ಡಿಪಡಿಸುವುದಿಲ್ಲ. ಪಕ್ಷದ ಹೋರಾಟಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಮುಖಂಡರು, ಕಾರ್ಯಕರ್ತರಲ್ಲಿ ಮಾಧ್ಯಮಗಳ ಮೂಲಕ ಮನವಿ ಮಾಡಿಕೊಳ್ಳುತ್ತೇನೆ. ಮತ್ತೊಮ್ಮೆ ಶಾಸಕಾಂಗ ಪಕ್ಷದ ಸಭೆ ಕರೆಯಲು ನಮ್ಮ ನಾಯಕರು ಮಾರ್ಗದರ್ಶನ ನೀಡಿದ್ದು, ಸಿಎಂ ಜೊತೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.

 

About the Author

admin

Administrator

Visit Website View All Posts

Spread the love

Post navigation

Previous: ರಾಹುಲ್ ಗಾಂಧಿ ಅಪಪ್ರಚಾರಕ್ಕಾಗಿ ಬರುತ್ತಾರೆ: ವಿಜಯೇಂದ್ರ
Next: BBMP elections; ನ 3ಕ್ಕೆ ವಿಚಾರಣೆ ಮುಂದೂಡಿಕೆ

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.