ಬೆಂಗಳೂರು: ಸಾರಿಗೆ ನೌಕರರು ಕೇಳಿರುವ ಬೇಡಿಕೆಯಲ್ಲಿ ತಪ್ಪಿಲ್ಲ. ಸಾರಿಗೆ ನೌಕರರು ಹಠ ಮಾಡೋದು ಸರಿಯಲ್ಲ. ನೌಕರರು ಸಹಕಾರ ಕೊಡಬೇಕು. ಸಾರಿಗೆ ನೌಕರರ ಜೊತೆ ಸಿಎಂ, ಸಚಿವರು ಸಭೆ ಮಾಡಿದ್ದಾರೆ. ಸರ್ಕಾರದ ಪರಿಸ್ಥಿತಿಯನ್ನೂ ಸಾರಿಗೆ ನೌಕರರು ಗಮನದಲ್ಲಿಟ್ಟುಕೊಳ್ಳಬೇಕು. ನಾಗರಿಕರ ವಿಚಾರವನ್ನೂ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.
ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಡೇರಿಸಲಾಗದ ಬೇಡಿಕೆಯನ್ನ ಈಡೇರಿಸಿ ಅನ್ನೋದು ಸರಿಯಲ್ಲ. ಸಾರ್ವಜನಿಕರ ಹಿತ ಮುಖ್ಯ, ಸಾರಿಗೆ ನೌಕರರು ಅರ್ಥ ಮಾಡಿಕೊಳ್ಳಿ. ಹಠ ಮಾಡೋದು ಅರ್ಥ ಇಲ್ಲ. ಕೆಲವು ಸಾರಿಗೆ ನೌಕರರು ಕೆಲಸಕ್ಕೆ ಬಂದಿದ್ದಾರೆ. ಅವರಿಗೆಲ್ಲ ಅಭಿನಂದನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರ; ಸಾರಿಗೆ ಸಚಿವರು ಹೇಳಿದ್ದೇನು?
ಈಗಾಗಲೇ ಈ ವಿಚಾರವಾಗಿ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ, ವಿಚಾರಣೆ ನಡೆಯುತ್ತಿದ್ದರು ಕೂಡ ಸಾರಿಗೆ ನೌಕರರು ಮುಷ್ಕರ ಮಾಡುವುದು ಸರಿಯಲ್ಲ. ಇದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತದೆ ಹೊರತಾಗಿ ಯಾವುದೇ ರೀತಿ ಪ್ರಯೋಜನ ಇಲ್ಲ. ಎಲ್ಲ ರೀತಿಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರು ಕರ್ತವ್ಯ ನಿರ್ವಹಿಸುವುದು ಒಳ್ಳೆಯದು ಎಂದಿದ್ದಾರೆ.
