ಬೆಂಗಳೂರು: ಬೆಂಗಳೂರು ಜಲ ಮಂಡಳಿ ವತಿಯಿಂದ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಕಾಮಗಾರಿಗಳನ್ನು ಚುರುಕುಗೊಳಿಸುವಂತೆ ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್ ಮನೋಹರ್ ಸೂಚನೆ ನೀಡಿದರು.
ಇಂದು ವಿ.ವಿ ವ್ಯಾಲಿ, ಮೈಲಸಂದ್ರ ಘಟಕಗಳಿಗೆ ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಮೈಲಸಂದ್ರ ಎಸ್ ಟಿ ಪಿ ಕಾಮಗಾರಿ ಮುಗಿಸದೆ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಧ್ಯಕ್ಷರು. ಡಿಸೆಂಬರ್ ತಿಂಗಳಾಂತ್ಯಕ್ಕೆ ಈ ಕಾಮಗಾರಿ ಪೂರ್ಣಗೊಳ್ಳಬೇಕು. ಇಲ್ಲದಿದ್ದಲ್ಲಿ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವ ಸೂಚನೆ ನೀಡಿದರು.
ವೃಷಭಾವತಿ ವ್ಯಾಲಿ ಯೋಜನೆಯ ಕಾಮಗಾರಿ 2026 ಮಾರ್ಚ್ ತಿಂಗಳಿನಲ್ಲಿ ಪೂರ್ಣಗೊಳ್ಳಬೇಕು. ಈ ಯೋಜನೆ ಸಕಾಲದಲ್ಲಿ ಮುಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಟನಲ್ ರೋಡ್ ನಿರ್ಮಾಣ..!
ಹಸಿರು ಹಾದಿ – ನೀರಿನ ಭವಿಷ್ಯ ಅಭಿಯಾನದ ಅಂಗವಾಗಿ ಈ ಎರಡು ಸ್ಥಳಗಳಲ್ಲಿ 350 ಕ್ಕೂ ಹೆಚ್ಚು ಗಿಡಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ ಮಂಡಳಿಯ ಮುಖ್ಯ ಅಭಿಯಂತರರಾದ ಪರಮೇಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
