ಬೆಂಗಳೂರು: ರೇಣುಕಾ ಸ್ವಾಮಿ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾದ ಪವಿತ್ರ ಗೌಡ ಅವರಿಗೆ ಹೈಕೋರ್ಟ್ ನೀಡಿದ ಜಾಮೀನು ಅರ್ಜಿಯನ್ನು ರದ್ದು ಮಾಡಬೇಡಿ ಎಂದು ಪವಿತ್ರ ಗೌಡ ಅವರು ಸುಪ್ರೀಂಕೋರ್ಟಿಗೆ ಮನವಿ ಮಾಡಿದ್ದಾರೆ.
ನನಗೆ ಚಿಕ್ಕಮಗಳಿದ್ದಾಳೆ ಹಾಗಾಗಿ ದಯವಿಟ್ಟು ನನ್ನ ಜಾಮೀನು ಅರ್ಜಿಯನ್ನು ರದ್ದು ಮಾಡಬೇಡಿ ಎಂದು ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ ಜಾಮೀನನ್ನು ರದ್ದು ಮಾಡುವಂತೆ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದ್ದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಈಗ ತೀರ್ಪನ್ನು ಕಾಯ್ದಿರಿಸಿದೆ. ಇದನ್ನೂ ಓದಿ: ಅತ್ಯಾ*ಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಆರೋಪಿ, ಈ ಕುರಿತು ರಮ್ಯಾ ಹೇಳಿದ್ದೇನು?
ಜುಲೈ 24 ರಂದು ನಡೆದ ಕೊನೆಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಪೀಠ ನಿಮ್ಮ ವಾದ-ಪ್ರತಿವಾದವನ್ನು 3 ಪುಟಗಳಲ್ಲಿ ಸಂಕ್ಷಿಪ್ತವಾಗಿ ಒಂದು ವಾರದಲ್ಲಿ ತಿಳಿಸಿ ಎಂದು ಸೂಚಿಸಿದ್ದರು. ಅದರಂತೆ ಪವಿತ್ರಾ ಗೌಡ, ದರ್ಶನ್ ಮತ್ತು ಬೆಂಗಳೂರು ಪೊಲೀಸರ ಪರ ವಕೀಲರು ಲಿಖಿತ ರೂಪದಲ್ಲಿ ವಾದವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
