ಬೆಂಗಳೂರು: ಕನ್ನಡ ಭಾಷೆಯ ಕಾಟೇರ ಸಿನಿಮಾದಲ್ಲಿ ನಟ ದರ್ಶನ್ ಜೊತೆ ನಟಿಸಿದ ನಟಿ ಆರಾಧನಾ ಇದೀಗ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ನಾಯಕಿಯಾಗುತ್ತಿದ್ದಾರೆ.
ಹೌದು, ಹೊಸದಾಗಿ ನಿರ್ಮಾಣವಾಗುತ್ತಿರುವ ನೆಕ್ಸ್ಟ್ ಲೆವೆಲ್ ಸಿನಿಮಾಗೆ ಮಾಲಾಶ್ರೀಯವರ ಮಗಳು ಆರಾಧನಾ ನಾಯಕಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ತರುಣ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ತರುಣ್ ಶಿವಪ್ಪ ನೆಕ್ಸ್ಟ್ ಲೆವೆಲ್ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ. ವಿಭಿನ್ನತೆಗೆ ಹೆಸರುವಾಸಿಯಾಗಿರುವ ರಿಯಲ್ ಸ್ಟಾರ್ ಉಪೇಂದ್ರ ಈ ಚಿತ್ರದ ನಾಯಕರು.
ಆರಾಧನಾ ಮೊದಲ ಸಿನಿಮಾದಲ್ಲಿಯೇ ದರ್ಶನ್ ಅವರಂತಹ ಸ್ಟಾರ್ ಹೀರೋಗೆ ಜೋಡಿಯಾಗಿ ಅಭಿನಯಿಸಿದ್ದರು. ಇದೀಗ 2ನೇ ಚಿತ್ರದಲ್ಲಿಯೂ ಸೂಪರ್ ಸ್ಟಾರ್ ಉಪೇಂದ್ರ ಅವರಿಗೆ ನಾಯಕಿಯಾಗಿ ಸಾಥ್ ಕೊಡಲಿದ್ದಾರೆ. ಇದನ್ನೂ ಓದಿ: ಸುಪ್ರೀಂ ಕೋರ್ಟ್ ಗೆ ಪವಿತ್ರ ಏನೆಂದು ಮನವಿ ಮಾಡಿದ್ದಾಳೆ ಗೊತ್ತಾ?
ಬೆಂಗಳೂರಿನಲ್ಲಿಯೇ ‘ನೆಕ್ಸ್ಟ್ ಲೆವೆಲ್’ ಸಿನಿಮಾದ ಅದ್ಧೂರಿ ಮುಹೂರ್ತ ನಡೆಯಲಿದ್ದು, ಬೆಂಗಳೂರು, ಮುಂಬೈ, ಹೈದರಾಬಾದ್ ಸೇರಿದಂತೆ ಭಾರತದ ಹಲವು ಕಡೆ ಚಿತ್ರದ ಶೂಟಿಂಗ್ ನಡೆಯಲಿದೆ ಎಂದು ತಿಳಿದು ಬಂದಿದೆ.
